ಕರ್ನಾಟಕನಮ್ಮೂರುಪ್ರಮುಖ ಸುದ್ದಿಮೈಸೂರು

ಕಾವೇರಿ ಬಿಕ್ಕಟ್ಟು ಬಗೆಹರಿಸುವಂತೆ ಚಾಮುಂಡೇಶ್ವರಿಗೆ ಮೊರೆಹೋದ ಸಿಎಂ

ಕಾವೇರಿ ಬಿಕ್ಕಟ್ಟು ಬಗೆಹರಿಯಲಿ, ರಾಜ್ಯದ ಜನತೆಗೆ ನ್ಯಾಯ ದೊರಕಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿರುವುದಾಗಿ ತಿಳಿಸಿದರು.

ಚಾಮುಂಡಿ ಬೆಟ್ಟದಲ್ಲಿ ಶನಿವಾರ ಮೈಸೂರಿನಲ್ಲಿ 11 ದಿನಗಳ ಕಾಲ ನಡೆಯಲಿರುವ ಐತಿಹಾಸಿಕ ದಸರಾ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ವಿಚಾರದಲ್ಲಿ ನಿರಂತರ ಅನ್ಯಾಯವಾಗುತ್ತಿದೆ.  ರೈತರ ಬೆಳೆಗಳಿಗೆ ನೀರನ್ನು ನೀಡಲಾಗುತ್ತಿಲ್ಲ. ರಾಜ್ಯದ ಜನತೆಗೆ ಕುಡಿಯುವ ನೀರಿಗೂ ಬರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಕಳೆದೆರಡು ವರ್ಷಗಳಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. 2007 ರಿಂದ ತಮಿಳುನಾಡಿಗೆ 192 ಟಿ.ಎಂ.ಸಿ. ನೀರನ್ನು ಬಿಡಲಾಗುತ್ತಿದೆ. ಸೆಪ್ಟೆಂಬರ್ 20 ರ ವರೆಗೂ ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸಲಾಗಿದೆ ಎಂದು ತಿಳಿಸಿದರು.

ಮಧ್ಯಾಹ್ನ ಎರಡು ಗಂಟೆಯ ಬಳಿಕ ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಅವರ ಅಭಿಪ್ರಾಯವನ್ನು ಸಂಗ್ರಹಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಪೊಲೀಸ್ ಸಹಾಯವಾಣಿ ಕೇಂದ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ವೇದಿಕೆಯಲ್ಲಿ ನಾಡೋಜ ಚನ್ನವೀರ ಕಣವಿ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಸಹಕಾರ ಮತ್ತು ಸಕ್ಕರೆ ಸಚಿವ ಮಹದೇವ ಪ್ರಸಾದ್, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Leave a Reply

comments

Related Articles

error: