ಮೈಸೂರು

ಹಿಂದಿ ಹೇರಿಕೆಗೆ ವಿರೋಧ : ಪ್ರತಿಭಟನೆ

ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ವತಿಯಿಂದ ನ್ಯಾಯಾಲಯದ ಮುಂಭಾಗ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಹಿಂದಿ ಭಾಷೆಯನ್ನು ಕನ್ನಡಿಗರ ಮೇಲೆ ಹೇರುವ ಪ್ರಯತ್ನವನ್ನು ವಿರೋಧಿಸುತ್ತೇವೆ. ಶಾಲೆಗಳಲ್ಲಿ ಮಕ್ಕಳಿಗೆ ಹಿಂದಿ ನಮ್ಮ ರಾಷ್ಟ್ರ ಭಾಷೆ ಎನ್ನುವ ಸುಳ್ಳನ್ನು ಹೇಳಿಕೊಡುವ ಮೂಲಕ ಕನ್ನಡದ ಕುರಿತು ಕೀಳರಿಮೆ ಬೆಳೆಸಲಾಗುತ್ತಿದೆ ಎಂದರು.

ನ್ಯಾಯಾಲಯದ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆಯ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಈ ಕುರಿತು ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಕರವೇ ಮೈಸೂರು ಜಿಲ್ಲಾಧ್ಯಕ್ಷ ಜಗದೀಶ್, ಕುಮಾರ್, ರವಿ, ನಾಗರಾಜು ಹರೀಶ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Reply

comments

Related Articles

error: