ಮೈಸೂರು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆರ್ ಚೇತನ್, ಡಿಸಿಪಿ ಪ್ರದೀಪ್ ಗುಂಟಿ ಅಧಿಕಾರ ಸ್ವೀಕಾರ

ಮೈಸೂರು,ಜೂ.10:- ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆರ್ ಚೇತನ್ ಇಂದು ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಹೂಗುಚ್ಛ ನೀಡಿ ಬಳಿಕ ಅಧಿಕಾರ ಹಸ್ತಾಂತರಿಸಿದರು. ಆರ್ ಚೇತನ್ ಅವರು ಈ ಹಿಂದೆ ಕರಾವಳಿ ಸೆಕ್ಯೂರಿಟಿ ಪೊಲೀಸ್ (ಸಿಎಫ್ ಸಿ) ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕವಾಗಿದ್ದಾರೆ.

ಈ ಸಂದರ್ಭ ಮಾತನಾಡಿದ ಎಸ್ಪಿ ಆರ್ ಚೇತನ್ ಅವರು ಜಿಲ್ಲೆಯಲ್ಲಿ ಅಪರಾಧ ಕೃತ್ಯವನ್ನು ತಡೆಯುವಲ್ಲಿ ಶ್ರಮಿಸುವುದಾಗಿ ತಿಳಿಸಿದರು.

ಮೈಸೂರು ನಗರ ಉಪ ಪೊಲೀಸ್ ಆಯುಕ್ತರಾಗಿ ಪ್ರದೀಪ್ ಗುಂಟಿ ಇಂದು ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ಐಎಸ್ ಡಿ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: