ದೇಶಪ್ರಮುಖ ಸುದ್ದಿ

ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ : ಪ್ರಧಾನಿ ಮೋದಿ ಸಾರ್ವಜನಿಕರನ್ನು ಲೂಟಿ ಮಾಡುವುದನ್ನು ನಿಲ್ಲಿಸಲಿ

ದೇಶ(ನವದೆಹಲಿ)ಜೂ.11:- ದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ವಿರೋಧಿಸಿ ಕಾಂಗ್ರೆಸ್ ಇಂದು ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಸುತ್ತಿದೆ.

ಮೋದಿ ಸರ್ಕಾರ ಸಾಮಾನ್ಯ ಜನರನ್ನು ಲೂಟಿ ಮಾಡುವುದನ್ನು ನಿಲ್ಲಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಕೆ.ಸಿ.ವೇಣುಗೋಪಾಲ್ ವಾಗ್ದಾಳಿ ನಡೆಸಿದ್ದಾರೆ. ಕಳೆದ 5 ತಿಂಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 44 ಪಟ್ಟು ಹೆಚ್ಚಿಸಲಾಗಿದೆ. 250 ನಗರಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ. ಆಗಿದೆ ಜನಸಾಮಾನ್ಯರು ಬದುಕುವುದಾದರು ಹೇಗೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ತೈಲ ಬೆಲೆಗಳಿಗೆ ಸಂಬಂಧಿಸಿದಂತೆ ದೇಶಾದ್ಯಂತ ಪೆಟ್ರೋಲ್ ಪಂಪ್‌ ಗಳ ಮುಂದೆ ಇಂದು ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿತ್ತು. ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರು ದೆಹಲಿ, ಪಂಜಾಬ್, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಎತ್ತಿನಗಾಡಿ ಓಡಿಸುವ ಮೂಲಕ ಪ್ರತಿಭಟನೆ ನಡೆಸಿದರು. ಇದರೊಂದಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: