ಕರ್ನಾಟಕಪ್ರಮುಖ ಸುದ್ದಿ

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಸಿಎಂ ಮಮತಾ ಬ್ಯಾನರ್ಜಿ ಸಂತಾಪ

ಬೆಂಗಳೂರು,ಜೂ.12-ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರ ನಿಧನಕ್ಕೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿದ್ದಲಿಂಗಯ್ಯ ಅವರ ನಿಧನವು ಭಾರತೀಯ ಸಾಹಿತ್ಯಕ್ಕೆ ಮತ್ತು ದಲಿತ ಸಮುದಾಯಕ್ಕೆ ನಷ್ಟ ಎಂದು ಮಮತಾ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಮತಾ, ‘ಕವಿ, ಹೋರಾಟಗಾರ ಸಿದ್ದಲಿಂಗಯ್ಯ ಅವರ ನಿಧನದ ಸುದ್ದಿ ತಿಳಿದು ಬೇಸರವಾಯಿತು. ಬಂಡಾಯ ಸಾಹಿತ್ಯ, ಅವರ ಕ್ರಾಂತಿಕಾರಿ ಕಾವ್ಯ, ದಲಿತ ರಾಜಕೀಯದಲ್ಲಿನ ಅವರ ಪಾತ್ರ ಮತ್ತು ದಲಿತರ ಹಕ್ಕುಗಳಿಗೆ ದನಿಯಾಗಿದ್ದಾಗಿ ಅವರನ್ನು ಸದಾ ಸ್ಮರಿಸಲಾಗುತ್ತದೆ ಎಂದಿದ್ದಾರೆ. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: