ಮೈಸೂರು

ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ತ್ವರಿತ ಸೇವೆ : ಎಸ್ಪಿ ಆರ್.ಚೇತನ್

ಮೈಸೂರು,ಜೂ.12:-  ಹಿಂದಿನ ಪೊಲೀಸ್‌ ವರಿಷ್ಠಾಧಿಕಾರಿಗಳಂತೆಯೇ ಜನಸ್ನೇಹಿ ಪೊಲೀಸ್‌ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್‌.ಚೇತನ್‌ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ತ್ವರಿತವಾಗಿ ಸೇವೆ ಒದಗಿಸಲು ಕ್ರಮವಹಿಸಲಾಗುವುದು. ಪೊಲೀಸ್‌ ಠಾಣೆ ಮೆಟ್ಟಿಲೇರಿದವರಿಗೆ ಸರಿಯಾದ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಮುತುವರ್ಜಿ ವಹಿಸಲಿದೆ. ಜಿಲ್ಲೆಯಲ್ಲಿರುವ ಮಹಿಳೆಯರು, ದುರ್ಬಲ ವರ್ಗದವರಿಗೆ ನ್ಯಾಯ ಕೊಡಿಸುವ ಕೆಲಸ ಇಲಾಖೆಯಿಂದ ಆಗಲಿದೆ ಎಂದರು.

ಪೊಲೀಸ್‌ ವ್ಯವಸ್ಥೆ ಪರಿಣಾಮಕಾರಿಯಾಗಿ ಜಾರಿಯಾಗಲಿದೆ. ಕೋವಿಡ್‌ ನಿಯಂತ್ರಣ    ನಮ್ಮ ಮೊದಲ ಆದ್ಯತೆಯಾಗಿದೆ. ಲಾಕ್‌ಡೌನ್‌ ಸುಧಾರಣೆ ಮಾಡುವುದರ ಜೊತೆಗೆ ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಲಾಗುವುದು ಎಂದರು.

ಜಿಲ್ಲೆಯಲ್ಲಿ 18 ಮಂದಿ ಪೊಲೀಸರಿಗೆ ಸೋಂಕು ತಗುಲಿರುವ ಸಕ್ರಿಯ ಪ್ರಕರಣಗಳಿವೆ. ಅವರಲ್ಲಿ 17 ಮಂದಿ ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದಾರೆ ಎಂದು   ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: