ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖ : 7,810 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ರಾಜ್ಯ(ಬೆಂಗಳೂರು)ಜೂ.14:- ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. 7,810 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,65,134ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 125 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 32,913ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ 1,348 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,96,688ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ 23 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 18,648 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 25,51,365ಕ್ಕೆ ಏರಿಕೆಯಾಗಿದೆ. ಇನ್ನು 1,80,835 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ 1,29,617 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 7,810 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 6.02ಕ್ಕೆ ಇಳಿದಿದೆ.

ಹೊಸ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 1,348, ಬೆಳಗಾವಿಯಲ್ಲಿ 266, ಬಳ್ಳಾರಿಯಲ್ಲಿ 141, ಚಿಕ್ಕಬಳ್ಳಾಪುರದಲ್ಲಿ 141, ಚಿಕ್ಕಮಗಳೂರು 223, ದಕ್ಷಿಣ ಕನ್ನಡದಲ್ಲಿ 434, ದಾವಣಗೆರೆಯಲ್ಲಿ 391, ಹಾಸನದಲ್ಲಿ 581, ಮೈಸೂರಿನಲ್ಲಿ 1251, ಶಿವಮೊಗ್ಗದಲ್ಲಿ 393, ತುಮಕೂರಿನಲ್ಲಿ 342, ಉಡುಪಿಯಲ್ಲಿ 223, ಉತ್ತರ ಕನ್ನಡದಲ್ಲಿ 250 ಪ್ರಕರಣಗಳು ವರದಿಯಾಗಿವೆ.

ಕಳೆದ 24 ತಾಸಿನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಪೈಕಿ ಬೆಂಗಳೂರು ನಗರದಲ್ಲಿ 23, ಬೆಳಗಾವಿ 10, ಶಿವಮೊಗ್ಗ 3, ಹಾವೇರಿ 3, ಧಾರವಾಡದಲ್ಲಿ 7, ಮೈಸೂರಿನಲ್ಲಿ 25 ಪ್ರಕರಣಗಳು ಸೇರಿವೆ.

Leave a Reply

comments

Related Articles

error: