ಕರ್ನಾಟಕಪ್ರಮುಖ ಸುದ್ದಿ

ಬೆಂಗಳೂರಿಗೆ ಬರುತ್ತಿರುವ ವಲಸಿಗರಿಗೆ ಕೊರೊನಾ ಟೆಸ್ಟ್ ಕಡ್ಡಾಯ: ಸಿಎಂ ಬಿಎಸ್ವೈ

ಬೆಂಗಳೂರು,ಜೂ.14-ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ಇಂದಿನಿಂದ ಕಠಿಣ ನಿರ್ಬಂಧ ವಿಧಿಸಿ ಅನ್ ಲಾಕ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.

ಇದರ ಬೆನ್ನಲ್ಲೇ ಬೇರೆ ರಾಜ್ಯಗಳು ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ಬರುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಬೆಂಗಳೂರಿನಲ್ಲಿ ಗಣನೀಯವಾಗಿ ಇಳಿಕೆಯಾಗಿರುವ ಸೋಂಕು ಮತ್ತು ಸಾವು ಮತ್ತೆ ಏರಿಕೆಯಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರೈಲು ಹಾಗೂ ಬಸ್ ನಿಲ್ದಾಣಗಳಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಕೋವಿಡ್ ಟೆಸ್ಟ್ ಮಾಡಲು ಸರ್ಕಾರ ತೀರ್ಮಾನಿಸಿದೆ.

ನಿನ್ನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೊರಗಿನಿಂದ ಬೆಂಗಳೂರಿಗೆ ಬರುವವರಿಗೆ ಕಡ್ಡಾಯವಾಗಿ ಕೋವಿಡ್-19 ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಬೆಂಗಳೂರಲ್ಲಿ ಸದ್ಯ ಸಕ್ರಿಯ ಕೋವಿಡ್ ಕೇಸುಗಳು ಕಡಿಮೆಯಾಗಿವೆ. ಹೊರಗಿನಿಂದ ಈ ಸಂದರ್ಭದಲ್ಲಿ ಜನರು ಹೆಚ್ಚೆಚ್ಚು ಬರುತ್ತಿದ್ದರೆ ಮುಂದಿನ 15 ದಿನಗಳಲ್ಲಿ ನಗರದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಏರಿಕೆಯಾಗುವ ಸಾಧ್ಯತೆಯಿದೆ. ಹೀಗಾಗಿ ಹೊರಗಿನಿಂದ ಬೆಂಗಳೂರಿಗೆ ಬರುವವರಿಗೆ ಕಡ್ಡಾಯವಾಗಿ ಪರಿಣಾಮಕಾರಿಯಾಗಿ ಕೊರೊನಾ ಟೆಸ್ಟ್ ಮಾಡಿಸುವ ಬಗ್ಗೆ ನಾನು ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ಹೇಳಿದರು. (ಎಂ.ಎನ್)

Leave a Reply

comments

Related Articles

error: