ಮೈಸೂರು

ಡಾ.ರಾಜ್ ಕುಮಾರ್ ಜಯಂತಿ ಆಚರಣೆ

ಕರ್ನಾಟಕದ ಮೇರುನಟ ಡಾ.ರಾಜ್ ಕುಮಾರ್ ಅವರ 88ನೇ ಜಯಂತಿಯನ್ನು  ಕರ್ನಾಟಕ ವೀರಕೇಸರಿ ವೇದಿಕೆ ವತಿಯಿಂದ ಆಚರಿಸಲಾಯಿತು.

ಡಾ.ರಾಜ್ ಕುಮಾರ್ ಉದ್ಯಾನವನದಲ್ಲಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅಭಿಮಾನಿಗಳಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ.ಎಂ, ಸಮಾಜ ಸೇವಕ ಕೆ.ಆರ್.ಮಿಲ್ ಅಧ್ಯಕ್ಷ ಮೋಹನ್ ಕುಮಾರ್ ,ವರುಣ  ಅಧ್ಯಕ್ಷ ಮೋಹನ್ ಕುಮಾರ್ ಮತ್ತು ಕೃಷ್ಣ ರಾಜನ್, ಶಿವಕುಮಾರ್ ಗುರು ಹಾಗೂ ಪದಾಧಿಕಾರಿಗಳು ಈ ಸಂದರ್ಭಕ್ಕೆ ಸಾಕ್ಷಿಯಾದರು. (ಕೆ.ಎಂ.ಆರ್)

Leave a Reply

comments

Related Articles

error: