ಕರ್ನಾಟಕ

ಕಾವೇರಿ ಅನ್ಯಾಯ: ಅನಿರ್ದಿಷ್ಟ ಉಪವಾಸ ಆರಂಭಿಸಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ

hdd-huger-strike-webಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಪ್ರಕರಣದ ಸಂಬಂಧ ಸುಪ್ರಿಂ ಕೋರ್ಟ್‍ ನೀಡಿರುವ ತೀರ್ಪು ವಿರೋಧಿಸಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಶನಿವಾರ ಬೆಳಗ್ಗೆ ಬಸವನಗುಡಿಯಲ್ಲಿರುವ ಕಾರಂಜಿ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ವಿಧಾನಸೌಧದ ಮುಂದಿರುವ ಮಹಾತ್ಮ ಗಾಂಧಿಜಿ ಹಾಗೂ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗಾಂಧಿ ಪ್ರತಿಮೆಯ ಬಳಿ ಹೆಚ್ ಡಿ ದೇವೇಗೌಡರು ಉಪವಾಸ ಸತ್ಯಗ್ರಹ ಆರಂಭಿಸಿದ್ದಾರೆ.

ಕಾವೇರಿ ವಿಚಾರದಲ್ಲಿ ಆಗಿರುವ ನಿರ್ಣಯಗಳನ್ನು ಮಾಧ್ಯಮಗಳಿಂದ ಓದಿ ತಿಳಿದಿದ್ದೇನೆ. ಕಾವೇರಿ ಜಲವಿವಾದದ ವಿಚಾರದಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಬಹಳ ಮುಖ್ಯ. ಈ ಬಗ್ಗೆ ಪ್ರಧಾನಿ ಮೋದಿ ನಿನ್ನೆ ಚರ್ಚೆ ನಡೆಸಿದ್ದಾರೆಂದು ತಿಳಿದು ಬಂದಿದೆ.

ಎರಡು ದಿನ ತಜ್ಞರ ತಂಡ ಕಳುಹಿಸಿ ಕೇಂದ್ರ ಪರಾಮರ್ಶೆ ನಡೆಸಬೇಕು. ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ವಾಸ್ತವಾಂಶಗಳನ್ನು ತಿಳಿದುಕೊಳ್ಳಬೇಕು ಎಂದು ಆಗ್ರಹಿಸಿದರು.

ಪಾಕಿಸ್ತಾನದ ಸಮಸ್ಯೆಯಲ್ಲಿ ಪ್ರಧಾನಿ ಗಮನ ಹರಿಸಿದ್ದಾರೆ, ನನಗೂ ಅರ್ಥವಾಗುತ್ತದೆ. ಆದರೆ ಸುಪ್ರೀಮ್ ಕೋರ್ಟ್ ಆದೇಶ ರಾಜ್ಯದ ಪಾಲಿಗೆ ಮರಣ ಶಾಸನವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ತಮಿಳುನಾಡು ಸಿಎಂ ಜಯಲಲಿತಾ ಅವರ ಆರೋಗ್ಯ ಸುಧಾರಿಸಲಿ ಎಂದು ಪ್ರಾರ್ಥಿಸುವೆ. ಸುಪ್ರೀಂ ಕೋರ್ಟ್‍ ತೀರ್ಪಿನ ವಿರುದ್ಧ ಪ್ರತಿಭಟಿಸಲು ಗಾಂಧಿ ಪ್ರತಿಮೆ ಬಳಿ ಧರಣಿ ಕೂರುತ್ತಿದ್ದೇನೆ. ರಾಜ್ಯದ ಜನ ರಲ್ಲಿ ತಾಳ್ಮೆಯಿಂದಿರಬೇಕು ಎಂದು ದೇವೇಗೌಡರು ಮನವಿ ಮಾಡಿದರು.

Leave a Reply

comments

Related Articles

error: