ಕರ್ನಾಟಕಪ್ರಮುಖ ಸುದ್ದಿ

ಹವಾಮಾನ ಆಧಾರಿತ ಬೆಳೆವಿಮೆಗೆ ಹೆಸರು ನೋಂದಾಯಿಸಿ

ರಾಜ್ಯ(ಮಡಿಕೇರಿ) ಜೂ.15:- 2021-22ನೇ ಸಾಲಿನ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಹಾಗೂ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಜೂ. 30 ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ನೋಂದಣಿಗೆ ಜೂ 30 ಅಂತಿಮ ದಿನಾಂಕವಾಗಿದೆ. ಅಂತಿಮ ದಿನಾಂಕಕ್ಕೆ ಕೆಲವೇ ದಿನಗಳಿರುವಾಗ ನೋಂದಣಿ ಪ್ರಕ್ರಿಯೆ ಆರಂಭಿಸಿದರೆ ತಂತ್ರಾಂಶದಲ್ಲಿ ಒತ್ತಡ ಹೆಚ್ಚಾಗಿ ಕೆಲಸ ನಿಧಾನವಾಗುವುದರಿಂದ ಅನೇಕ ರೈತರು ಸೌಲಭ್ಯದಿಂದ ವಂಚಿತರಾಗುವ ಸಂಭವವಿರುತ್ತದೆ.
2021-22 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಕೊಡಗು ಜಿಲ್ಲೆಯ ಎಲ್ಲಾ 3 ತಾಲೂಕುಗಳಲ್ಲಿ ಜಿಲ್ಲೆಯ ಮುಖ್ಯ ಬಹುವಾರ್ಷಿಕ ಬೆಳೆಗಳಾದ ಕಾಳು ಮೆಣಸು ಹಾಗೂ ಅಡಿಕೆ ಬೆಳೆಗಳಿಗೆ ಅನುಷ್ಠಾನ ಗೊಳಿಸಲಾಗುತ್ತಿದೆ. ಹವಾಮಾನ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಮತ್ತಿತರ ಮಾಹಿತಿಯನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ.
ಈ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಹಾಗೂ ಕಂತಿನ ವಿವರ ಇಂತಿದೆ.

ಕಾಳುಮೆಣಸು ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ ರೂ. 47,000, ಪ್ರತಿ ಹೆಕ್ಟೇರ್ ಗೆ ವಿಮಾ ಕಂತು (ಶೇ.30), ರೂ. 14,100, ರೈತರು ಪಾವತಿಸಬೇಕಾಗಿರುವ ಕಂತು (ಶೇ.5), ರೂ. 2,350 ಗಳಾಗಿದೆ.
ಅಡಿಕೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ. 1,28,000, ಪ್ರತಿ ಹೆಕ್ಟೇರ್ ಗೆ ವಿಮಾ ಕಂತು (ಶೇ.30), ರೂ. 38,400, ರೈತರು ಪಾವತಿಸಬೇಕಾಗಿರುವ ಕಂತು (ಶೇ.5), ರೂ. 6,400 ಗಳಾಗಿದೆ.
ಹೆಚ್ಚಿನ ಮಾಹಿತಿಗೆ ರೈತರು ಕೂಡಲೇ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು, ಹತ್ತಿರದ ಬ್ಯಾಂಕುಗಳ ಅಧಿಕಾರಿಗಳನ್ನು ಅಥವಾ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿಎಸ್‍ಸಿ) ಸಂಪರ್ಕಿಸಬಹುದಾಗಿದೆ ಎಂದು ಲೀಡ್ ಬ್ಯಾಂಕ್ ನ ಮುಖ್ಯಸ್ಥರಾದ ಆರ್.ಕೆ.ಬಾಲಚಂದ್ರ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: