ಕರ್ನಾಟಕಪ್ರಮುಖ ಸುದ್ದಿ

ಕೊಡಗು ಜಿಲ್ಲೆಯಲ್ಲಿ ಮಂಗಳವಾರ 59 ಹೊಸ ಕೋವಿಡ್-19 ಪ್ರಕರಣ

ರಾಜ್ಯ(ಮಡಿಕೇರಿ) ಜೂ.16:- ಜಿಲ್ಲೆಯಲ್ಲಿ ಮಂಗಳವಾರ 59 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 31 ಆರ್‍ಟಿಪಿಸಿಆರ್ ಮತ್ತು 28 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 16 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 13 ಪ್ರಕರಣಗಳು ಆರ್‍ಟಿಪಿಸಿಆರ್ ಮತ್ತು 3 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 35 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 17 ಆರ್‍ಟಿಪಿಸಿಆರ್ ಮತ್ತು 18 ಪ್ರಕರಣಗಳು ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 8 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 1 ಆರ್‍ಟಿಪಿಸಿಆರ್ ಮತ್ತು 7 ಪ್ರಕರಣ ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 27,332 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 196 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 25,425 ಮಂದಿ ಗುಣಮುಖರಾಗಿದ್ದಾರೆ. 1556 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2 ಸಾವು ಉಂಟಾಗಿದ್ದು, ಒಟ್ಟು 351 ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 203 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.3.9 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: