ಕರ್ನಾಟಕಪ್ರಮುಖ ಸುದ್ದಿ

“ಇಲಾಖೆಯ ನಡಿಗೆ ರೈತರ ಕಡೆಗೆ” ವಿಶೇಷ ವಾಹನಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಚಾಲನೆ

ರಾಜ್ಯ(ಚಾಮರಾಜನಗರ)ಜೂ.15:- ಚಾಮರಾಜನಗರ ಜಿಲ್ಲಾಡಳಿತ ಭವನದಲ್ಲಿ ಮುಂಗಾರು ಹಂಗಾಮಿನ ಪೂರ್ವಸಿದ್ಧತೆ ಸಭೆ ನಡೆಸಿ, ರೈತರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಲಭ್ಯತೆ ಕುರಿತು ಜಿಲ್ಲೆಯ ಜನಪ್ರತಿನಿಧಿಗಳು, ಕೃಷಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಾಯಿತು.

ಆನಂತರ, ರೈತರಿಗೆ ಕೃಷಿ ಚಟುವಟಿಕೆಗಳ ಬಗ್ಗೆ ಮಾಹಿತಿ ಒದಗಿಸುವ ಹಾಗೂ ಇಲಾಖೆಯ ಕಾರ್ಯಕ್ರಮಗಳ ಕುರಿತು ಪ್ರಚಾರ ನೀಡಲು “ಇಲಾಖೆಯ ನಡಿಗೆ ರೈತರ ಕಡೆಗೆ” ಎಂಬ ಕಾರ್ಯಕ್ರಮದಡಿ ವಿಶೇಷ ವಾಹನಗಳಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯ ಜನಪ್ರತಿನಿಧಿಗಳು, ಕೃಷಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: