ಕರ್ನಾಟಕಪ್ರಮುಖ ಸುದ್ದಿಮೈಸೂರು

ಕೃಷಿಗೆ ಸಂಬಂಧಿಸಿದ ಮಾಹಿತಿ ಮಾಧ್ಯಮಗಳಿಗೆ ಹಂಚಿಕೊಂಡಾಗ ಮಾಹಿತಿ ರೈತರನ್ನು ತಲುಪಲು ಸಾಧ್ಯ; ಸಚಿವ ಬಿ.ಸಿ.ಪಾಟೀಲ್

ಮೈಸೂರು,ಜೂ.16:- ಜಿಲ್ಲೆಯಲ್ಲಿ ಬಿತ್ತನೆ ಬೀಜ ಕೊರತೆ ಇದೆ ಎಂದು ಸುದ್ದಿಯಾಗುತ್ತಿದೆ.ಆದರೆ ಕೃಷಿ ಇಲಾಖೆಯಲ್ಲಿ ಕೊರತೆ ಇಲ್ಲ ಎಂದು ಹೇಳುತ್ತಿದ್ದೀರಿ. ಮತ್ತೇಕೆ ಮಾಧ್ಯಮಗಳಲ್ಲಿ ಸುದ್ದಿ ಯಾಗುತ್ತಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಮಹಾಂತೇಶಪ್ಪ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಪ್ರಶ್ನಿಸಿದರು.

ಮೈಸೂರು ಜಿಲ್ಲಾ ಪಂಚಾಯತ್  ಸಭಾಂಗಣದಲ್ಲಿಂದು ಮುಂಗಾರು ಪ್ರಾರಂಭವಾಗಿರುವ ಹಿನ್ನೆಲಯಲ್ಲಿ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಲಭ್ಯತೆ ಹಾಗೂ ಪೂರ್ವ ಸಿದ್ಧತೆ ಕುರಿತು ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಹಾಗೂ ಕೃಷಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಎಲ್ಲ ಮಾಹಿತಿಗಳನ್ನು ಮಾಧ್ಯಮದವರೊಂದಿಗೆ ಹಂಚಿಕೊಳ್ಳಬೇಕು. ಹಾಗಾದರೆ ಮಾತ್ರ ರೈತರಿಗೆ ಮಾಹಿತಿ ತಿಳಿಯುತ್ತದೆ. ತಾಲೂಕು ಮಟ್ಟದಿಂದಲೂ ಆಗಿದ್ದಾಗಿನ ಮಾಹಿತಿಯನ್ನು ಮಾಧ್ಯಮದವರಿಗೆ ತಿಳಿಸಬೇಕು ಎಂದು  ಅಧಿಕಾರಿಗಳಿಗೆ ಸಚಿವ ಬಿಸಿ ಪಾಟೀಲ್ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್  ಅವರು ಈ ವೇಳೆ ಎಲ್ಲ ಹಂತದ ಅಧಿಕಾರಿಗಳು ವಾರ್ತಾ ಇಲಾಖೆಯ ಸಹಾಯದಿಂದ ಪತ್ರಿಕಾಪ್ರಕಟಣೆ ನೀಡಿ ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಹರ್ಷವರ್ಧನ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಜಿ.ಪಂ ಸಿಇಒ ಎ.ಎಂ.ಯೋಗೀಶ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: