ಸುದ್ದಿ ಸಂಕ್ಷಿಪ್ತ

ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

ರಾಜ್ಯ(ಮಡಿಕೇರಿ) ಜೂ.16 :-ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ ಸಿಪೆಟ್ (ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ) ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋ ರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಈ ಸಂಸ್ಥೆಯು ದೇಶದ ಪಾಲಿಮರ್/ ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ. 2021-22ನೇ ಸಾಲಿನ 2 ನೇ ವರ್ಷದ (ಲ್ಯಾಟರಲ್ ಎಂಟ್ರಿ) ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನಿಸಿದೆ.
ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (DPT) –2 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (DPMT)-2 ವರ್ಷ, ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರಾದ ಆರ್.ಟಿ. ನಾಗರಳ್ಳಿ ಅವರು ತಿಳಿಸಿದ್ದಾರೆ. ಪಿಯುಸಿ (ವಿಜ್ಞಾನ) ಅಥವಾ ಐಟಿಐ (Fitter/Turner/Machinist/Draftsman) ಪರೀಕ್ಷೆಯಲ್ಲಿ ಹಾಜರಾದವರು/ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ:0821-2510618/ 9480253024/ 9141075968 ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರೀಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: