ಕರ್ನಾಟಕಪ್ರಮುಖ ಸುದ್ದಿ

ಮುಖ್ಯಮಂತ್ರಿ ಬದಲಾವಣೆ ಸಾಧ್ಯವೇ ಇಲ್ಲ, ನಾಳೆಯಿಂದ ಹೊಸ ಯಡಿಯೂರಪ್ಪ ಬರುತ್ತಾರೆ: ರಮೇಶ್ ಜಾರಕಿಹೊಳಿ

ಬೆಳಗಾವಿ,ಜೂ.17-ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಾಧ್ಯವೇ ಇಲ್ಲ. ಮುಂದಿನ ಎರಡು ವರ್ಷ ಅವರೇ ಮುಂದುವರಿಯುತ್ತಾರೆ. ಜೂ.18ರ ನಂತರ ಹೊಸ ಯಡಿಯೂರಪ್ಪ ಆಗಿ ರಾಜ್ಯದ ಮುಂದೆ ಬರಲಿದ್ದಾರೆ ಎಂದು ಗೋಕಾಕ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.

ಗೋಕಾಕದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ. ನಾವು ಯಡಿಯೂರಪ್ಪ ಹಾಗೂ ಅಮಿತ್ ಶಾ ನಂಬಿ ಬಿಜೆಪಿಗೆ ಬಂದಿದ್ದೇವೆ ಎಂದರು.

ಕೆಲವು ಶಾಸಕರು ಯಡಿಯೂರಪ್ಪ ವಿರುದ್ಧ ಅಪಸ್ವರ ತಗೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿರುವ ಎಲ್ಲ ಶಾಸಕರೂ ಕುಟುಂಬ ಇದ್ದಂತೆ. ಯಡಿಯೂರಪ್ಪ ಅವರು ಎಲ್ಲರನ್ನೂ ಕರೆದು ಮಾತನಾಡಬೇಕು ಎಂದು ಮನವಿ ಮಾಡುತ್ತೇನೆ ಎಂದರು.

ಸಿ.ಪಿ. ಯೋಗೇಶ್ವರ ಈಗಲೂ ನನ್ನ ಸ್ನೇಹಿತ. ಅವರಿಗೆ ಏನಾದರೂ ತಪ್ಪು ಗ್ರಹಿಕೆ ಇದ್ದರೆ ಯಡಿಯೂರಪ್ಪ ಮುಂದೆ ಕುಳಿತು ಮಾತನಾಡಿ ಸರಿಪಡಿಸಿಕೊಳ್ಳಬೇಕು ಎಂದು ಕೋರುತ್ತೇನೆ ಎಂದರು.

ವಿರೋಧ ಪಕ್ಷದವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಹೀಗಾಗಿ ಕೇವಲ ನಮ್ಮ ವಿರುದ್ಧ ಮಾತನಾಡುವುದೇ ಆಗಿದೆ. ಮುಂದಿನ ದಿನಗಳಲ್ಲಿ ಎರಡು ವರ್ಷಗಳ ಕಾಲ ಮೂಲ ಮೂಲೆಯಲ್ಲಿ ಪಕ್ಷ ಸಂಘಟಿಸಿ 2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. (ಎಂ.ಎನ್)

Leave a Reply

comments

Related Articles

error: