ಮೈಸೂರು

ಮಕ್ಕಳ ಮೇಲೆ ಕೋವಿಡ್ ಲಸಿಕೆ ಪ್ರಯೋಗ: ಲಸಿಕೆ ಪಡೆದುಕೊಂಡ ಮುಡಾ ಅಧ್ಯಕ್ಷರ ಪುತ್ರಿ

ಮೈಸೂರು,ಜೂ.17-ನಗರದಲ್ಲಿ ಮಕ್ಕಳ ಮೇಲೆ ಕೋವಿಡ್ ಲಸಿಕಾ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್ ಅವರ ಪುತ್ರಿ ನವ್ಯಾ ಅವರು ಲಸಿಕೆಯನ್ನು ಪಡೆದುಕೊಂಡರು.

ನಗರದ ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ನವ್ಯಾ ಅವರು ಕೋವಿಡ್ ಲಸಿಕೆ ಪಡೆದುಕೊಂಡ ವೇಳೆ ಎಚ್.ವಿ.ರಾಜೀವ್ ಹಾಗೂ ಅವರ ಪತ್ನಿ ಇದ್ದರು.

2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ಪ್ರಾಯೋಗಿಕ ಪರೀಕ್ಷೆಯನ್ನು ಕ್ಲಿನಿಕಲ್ ಟ್ರಯಲ್ ರಿಜಿಸ್ಟ್ರಿ ಆಫ್ ಇಂಡಿಯಾ ವತಿಯಿಂದ ಮೈಸೂರು ಮೆಡಿಕಲ್ ಕಾಲೇಜ್ ಮತ್ತು ರಿಸರ್ಚ್ ಇನ್ಸ್ಟಿಟ್ಯೂಟ್ ನ ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿದೆ. (ಎಂ.ಎನ್)

Leave a Reply

comments

Related Articles

error: