ದೇಶಪ್ರಮುಖ ಸುದ್ದಿ

ಅಂಬಾನಿ ನಿವಾಸದ ಬಳಿ ಸ್ಫೋಟಕ ಪ್ರಕರಣ: ಎನ್‌ಐಎಯಿಂದ ಮಾಜಿ ಎನ್ ಕೌಂಟರ್ ಸ್ಪೆಶಲಿಸ್ಟ್ ಪ್ರದೀಪ್ ಶರ್ಮಾ ಬಂಧನ

ಮುಂಬೈ,ಜೂ.17-ಉದ್ಯಮಿ ಮುಖೇಶ್ ಅಂಬಾನಿ ಮನೆ ಆಂಟಿಲಿಯಾ ಬಳಿ ಸ್ಫೋಟಕ ಪ್ರಕರಣ ಮತ್ತು ಉದ್ಯಮಿ ಮನ್ಸುಖ್ ಹಿರಾನ್ ಹತ್ಯೆ ಪ್ರಕರಣದಲ್ಲಿ ಭಾಗಿ ಆರೋಪದ ಮೇರೆಗೆ ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾ ರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ.

ಅಂಧೇರಿಯ ಜೆ ಬಿ ನಗರದಲ್ಲಿರುವ ಆತನ ನಿವಾಸದ ಮೇಲೆ ಬೆಳಿಗ್ಗೆ 6 ಗಂಟೆ ಸುಮಾರಿಗೆ ಎನ್ ಐಎ ದಾಳಿ ನಡೆಸಿದೆ. ಹಲವು ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಿದ ಕೆಲವೊಂದು ಮಹತ್ವದ ದಾಖಲೆಗಳನ್ನು ಆತನ ಮನೆಯಿಂದ ವಶಕ್ಕೆ ಪಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕೆಲ ತಾಸುಗಳ ವಿಚಾರಣೆ ಬಳಿಕ ಗುರುವಾರ ಆತನನ್ನು ಬಂಧಿಸಲಾಗಿದೆ. ವೈದ್ಯಕೀಯ ಪರೀಕ್ಷೆ ಪೂರ್ಣಗೊಂಡ ಬಳಿಕ ಶರ್ಮಾನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ. ಈ ಪ್ರಕರಣದಲ್ಲಿ ಎನ್ ಐಎ ಬಂಧಿಸಿರುವ ಪೊಲೀಸ್ ಇಲಾಖೆ ಸಿಬ್ಬಂದಿ ಪೈಕಿ ಶರ್ಮಾ ಐದನೇಯವರು ಮತ್ತು ಎಂಟನೇ ವ್ಯಕ್ತಿಯಾಗಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: