ಸುದ್ದಿ ಸಂಕ್ಷಿಪ್ತ

ಗ್ರಾಮ ಕಾಯಕ ಮಿತ್ರ”ಗೆ ಅರ್ಜಿ ಆಹ್ವಾನ

ರಾಜ್ಯ(ಮಡಿಕೇರಿ) ಜೂ.17 :-ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾರ್ಯಚರಣೆ ಮಾರ್ಗಸೂಚಿ ಅನ್ವಯ ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬರು “ಗ್ರಾಮ ಕಾಯಕ ಮಿತ್ರ”ರನ್ನು ಭರ್ತಿ ಮಾಡಿಕೊಳ್ಳಲು ಅವಕಾಶವಿದೆ. ಅದರಂತೆ ಸರ್ಕಾರದ ಪತ್ರದಲ್ಲಿ ಹತ್ತು ಸಾವಿರಕ್ಕಿಂತ ಹೆಚ್ಚು ಮಾನವ ದಿನ ಸೃಜನೆ ಮಾಡಿದ ಗ್ರಾಮ ಪಂಚಾಯಿತಿಗಳಿಗೆ ಗ್ರಾಮ ಕಾಯಕ ಮಿತ್ರ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.
ಅದರಂತೆ, ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲು, ಸೋಮವಾರಪೇಟೆ ತಾಲ್ಲೂಕಿನ ನೆಲ್ಲಿಹುದಿಕೇರಿ ಕಿರುಗಂದೂರು, ಗೌಡಳ್ಳಿ, ಹೆಬ್ಬಾಲೆ, ಹಾನಗಲ್ಲು, ಗಣಗೂರು, ದುಂಡಳ್ಳಿ, ಕೊಡ್ಲಿಪೇಟೆ, ಬೇಳೂರು ಹಾಗೂ ವಿರಾಜಪೇಟೆ ತಾಲ್ಲೂಕಿನ ನಿಟ್ಟೂರು, ಸಿದ್ದಾಪುರ, ಬೇಟೋಳಿ ಸೇರಿದಂತೆ ಒಟ್ಟು 13 ಗ್ರಾಮ ಪಂಚಾಯಿತಿಗಳಲ್ಲಿ “ಗ್ರಾಮ ಕಾಯಕ ಮಿತ್ರ” ರನ್ನು ಆಯ್ಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ.
ಅರ್ಹತೆಗಳು: “ಗ್ರಾಮ ಕಾಯಕ ಮಿತ್ರ” ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬೇಕು. ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿರಬೇಕು. ದಿನಾಂಕ: 01.01.2021 ಕ್ಕೆ ಅನ್ವಯಿಸುವಂತೆ ತಾನು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್‍ಕಾರ್ಡ್ ಹೊಂದಿರಬೇಕು. ಅಭ್ಯರ್ಥಿಯು ಕಳೆದು ಮೂರು ವರ್ಷಗಳಲ್ಲಿ (2018-19, 2019-20 ಮತ್ತು 2020-21) ಕನಿಷ್ಠ ಎರಡು ವರ್ಷ ಯೋಜನೆಯಡಿ ಅಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಿರಬೇಕು.
ದಿನಾಂಕ: 01.01.2021 ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಿರಬಾರದು. ಓದು ಮತ್ತು ಬರಹ ಚೆನ್ನಾಗಿ ತಿಳಿದಿರಬೇಕು. ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಯು ಪರಿಣಾಮಕಾರಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣ ಹೊಂದಿರಬೇಕು. ಗ್ರಾಮ ರೋಜ್‍ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು. ಇದಕ್ಕೆ ಗ್ರಾಮ ರೋಜ್‍ಗಾರ್ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.
ಅರ್ಹ ಅಭ್ಯರ್ಥಿಗಳು ಜೂನ್ 22 ರಂದು ಸಂಜೆ 5 ಗಂಟೆಯೊಳಗಾಗಿ ಅಗತ್ಯ ದಾಖಲೆಯೊಂದಿಗೆ ಮುದ್ದಾಂ ಮೂಲಕ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೊಡಗು ಜಿ.ಪಂ ಸಿಇಒ ಭನ್ವರ್ ಸಿಂಗ್ ಮೀನಾ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: