ಕರ್ನಾಟಕಪ್ರಮುಖ ಸುದ್ದಿ

ಜೂ.22 ರಂದು ಕೈಗಾರಿಕಾ ಸ್ಪಂದನಾ ಸಭೆ; ಸಮಸ್ಯೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಸಲ್ಲಿಸಲು ಅವಕಾಶ

ರಾಜ್ಯ(ಮಡಿಕೇರಿ) ಜೂ.19:- ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಜೂನ್, 22 ರಂದು ಕೈಗಾರಿಕಾ ಸ್ಪಂದನಾ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಭೆಯಲ್ಲಿ ಉದ್ದಿಮೆದಾರರ ಸಮಸ್ಯೆಗಳನ್ನು ಚರ್ಚಿಸಲಾಗುವುದು. ಕೈಗಾರಿಕೆಗಳಿಗೆ ಸಮಸ್ಯೆಗಳಿದ್ದಲ್ಲಿ, ಈ ಸಮಸ್ಯೆಗಳನ್ನು ಲಿಖಿತ ರೂಪದಲ್ಲಿ ಈ ಕಾರ್ಯಾಲಯಕ್ಕೆ ಜೂನ್, 21 ರೊಳಗೆ ಇ-ಮೇಲ್: [email protected] ಮುಖಾಂತರ ಅಥವಾ ಖುದ್ದಾಗಿ ಲಿಖಿತವಾಗಿ ಸಲ್ಲಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: