ಸುದ್ದಿ ಸಂಕ್ಷಿಪ್ತ

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ರಾಜ್ಯ(ಮಡಿಕೇರಿ) ಜೂ.19:- ಕೃಷಿ ಕ್ಷೇತ್ರದಲ್ಲಿ ವಿನೂತನ, ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಶ್ರೇಯೋಭಿವೃದ್ದಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವ ರೈತರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪದಾಗಿದ್ದು, ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು.

ಈ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಬಯಸುವ ರೈತರುಗಳು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜುಲೈ, 20 ರೊಳಗೆ  ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಪ್ರಥಮ ರೂ.1,25,000, ದ್ವಿತೀಯ ರೂ. 1 ಲಕ್ಷ, ತೃತೀಯ ರೂ.75 ಸಾವಿರ ಮತ್ತು ಕೃಷಿ ಪಂಡಿತ ಉದಯೋನ್ಮುಖ ರೂ. 50 ಸಾವಿರ ಬಹುಮಾನ ನೀಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: