ಕರ್ನಾಟಕಪ್ರಮುಖ ಸುದ್ದಿ

ರಾಜ್ಯದ ಸರ್ಕಾರಿ ಉದ್ಯೋಗಗಳಲ್ಲಿ ಮಂಗಳಮುಖಿಯರಿಗೆ ಶೀಘ್ರ ಶೇ.1ರಷ್ಟು ಮೀಸಲು: ಹೈಕೋರ್ಟ್ ಗೆ ಸರ್ಕಾರ

ಬೆಂಗಳೂರು,ಜೂ.19-ರಾಜ್ಯದಲ್ಲಿನ ಎಲ್ಲ ಸರ್ಕಾರಿ ಉದ್ಯೋಗಗಳಲ್ಲಿ ಮಂಗಳಮುಖಿಯರಿಗೆ ಶೇ.1ರಷ್ಟು ಹುದ್ದೆಗಳನ್ನು ಮೀಸಲಿಡುವ ಸಂಬಂಧ ಕರಡು ಅಧಿಸೂಚನೆ ಹೊರಡಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಸಂಗಮ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಪಿಐಎಲ್‌ ಅನ್ನು ಸಿಜೆ ಎ.ಎಸ್‌. ಓಕ್‌ ಮತ್ತು ನ್ಯಾ.ಸೂರಜ್‌ ಗೋವಿಂದರಾಜ್‌ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆ ನಡೆಸಿತು. ಸರ್ಕಾರಿ ವಕೀಲ ವಿಜಯಕುಮಾರ್‌ ಪಾಟೀಲ್‌, ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಸರ್ಕಾರದ ಎಲ್ಲ ಹುದ್ದೆಗಳಲ್ಲಿ ಶೇ.1ರಷ್ಟು ಹುದ್ದೆಗಳನ್ನು ಮಂಗಳಮುಖಿರಿಗೆ ಮೀಸಲಿಡಲು ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ-1977ರ ನಿಯಮ 9ಕ್ಕೆ ತಿದ್ದುಪಡಿ ತಂದು 1(ಡಿ)ಯನ್ನು ಸೇರ್ಪಡೆ ಮಾಡಲಾಗುತ್ತಿದೆ. ಈ ಕುರಿತ ಕರಡು ಅಧಿಸೂಚನೆ ಪ್ರಕಟಿಲಾಗಿದೆ ಎಂದರು.

ಅಲ್ಲದೆ, ಕರಡು ಅಧಿಸೂಚನೆಗೆ ಆಕ್ಷೇಪಣೆಗಳನ್ನು ಸ್ವೀಕರಿಸಿದ ಬಳಿಕ ಅಂತಿಮಗೊಳಿಸಲಾಗುವುದು. ಅದಕ್ಕೆ ಸ್ವಲ್ಪ ಸಮಯ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದರು. ಸರ್ಕಾರದ ಮೆಮೋ ಪರಿಶೀಲಿಸಿದ ನ್ಯಾಯಪೀಠ, ಕರಡು ಅಧಿಸೂಚನೆಯ ವಿಷಯ ದಾಖಲು ಮಾಡಿ ವಿಚಾರಣೆಯನ್ನು ಜು.20ಕ್ಕೆ ಮುಂದೂಡಿ ಅಷ್ಟರಲ್ಲಿ ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆ ಸೂಚನೆ ನೀಡಿತು. (ಎಂ.ಎನ್)

Leave a Reply

comments

Related Articles

error: