ಕರ್ನಾಟಕಪ್ರಮುಖ ಸುದ್ದಿಮೈಸೂರು

ಪೋಷಕರನ್ನು ಕಳೆದುಕೊಂಡ ಮಕ್ಕಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವೆ ಶಶಿಕಲಾ ಜೊಲ್ಲೆ

ಮೈಸೂರು, ಜೂ.19:- ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಬಾಲಕ ಹರ್ಷ ಅವರ ಮನೆಗೆ ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.

ಬಳಿಕ ಮಾತನಾಡಿದ ಅವರು, ಮಕ್ಕಳ ಸಂಪೂರ್ಣ ವಿದ್ಯಾಬ್ಯಾಸವನ್ನು ಸರ್ಕಾರವೇ ವಹಿಸಕೊಳ್ಳಲಿದೆ. ಅವರ ಖಾತೆಗೆ ಪ್ರತಿ ತಿಂಗಳು 3500ಹಣ ವನ್ನು ಹಾಕಲಾಗುವುದು. ಅಲ್ಲದೆ ಶೀಘ್ರವಾಗಿ ಒಂದು ಲಕ್ಷ ಹಣವನ್ನು ಬಿಡುಗಡೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಇದೆ ಸಂದರ್ಭದಲ್ಲಿ ಶಾಸಕ ಎಲ್.ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್ ಸೇರಿದಂತೆ ಇತರರು ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: