ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ ಮುಂಗಾರು ಚುರುಕು : ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯ(ಬೆಂಗಳೂರು)ಜೂ.21:- ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸೋಮವಾರದ ತನಕವೂ ಮುಳೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಯೆಲ್ಲೊ ಅಲರ್ಟ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯಲ್ಲಿ ಗಂಟೆಗೆ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. 3.9 ಮೀಟರ್ ನಷ್ಟು ಎತ್ತರದ ಅಲೆಗಳು ಏಳುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Leave a Reply

comments

Related Articles

error: