ದೇಶಪ್ರಮುಖ ಸುದ್ದಿ

ಜಮ್ಮು-ಕಾಶ್ಮೀರ: ಎಲ್‌ಇಟಿ ಮುಖ್ಯಸ್ಥ ಸೇರಿದಂತೆ ಮೂವರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ,ಜೂ.21-ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೂರ್ ಪ್ರದೇಶದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್ ಸಂಘಟನೆಯ ಮುಖ್ಯಸ್ಥ ಮುದಸಿರ್ ಪಂಡಿತ್ ಸೇರಿದಂತೆ ಒಟ್ಟು 3 ಉಗ್ರರನ್ನು ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಿದ್ದಾರೆ.

ಉತ್ತರ ಕಾಶ್ಮೀರ ಜಿಲ್ಲೆಯ ಸೊಪೋರ್‌ನ ಗುಂಡ್ ಬ್ರಾತ್ ಪ್ರದೇಶದಲ್ಲಿ ನಡೆದ ಮ್ಯಾರಥಾನ್ ಎನ್ ಕೌಂಟರ್ ನಲ್ಲಿ ಲಷ್ಕರ್ ಸಂಘಟನೆಯ ಪ್ರಮುಖ ಕಮಾಂಡರ್ ಮುದಸಿರ್ ಪಂಡಿತ್ ಮತ್ತು ವಿದೇಶಿ ಉಗ್ರ ಪಾಕ್ ಮೂಲದ ಅಸ್ರಾರ್ ಅಲಿಯಾಸ್ ಅಬ್ದುಲ್ಲಾ ಸೇರಿದಂತೆ ಮೂರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಗುಂಡ್‌ ಬ್ರಾತ್‌ನಲ್ಲಿ ಪಂಡಿತ್ ಸೇರಿದಂತೆ ಮೂವರು ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಭಾನುವಾರ ರಾತ್ರಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು.

ಈ ಬಗ್ಗೆ ಮಾಹಿತಿ ನೀಡಿರುವ ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಅವರು, ಕಾಶ್ಮೀರದಲ್ಲಿ 3 ಪೊಲೀಸರು, ಇಬ್ಬರು ಕೌನ್ಸಿಲರ್ ಗಳು, 2 ನಾಗರೀಕರ ಸಾವಿಗೆ ಕಾರಣರಾಗಿದ್ದ ಲಷ್ಕರ್ ಉಗ್ರರನ್ನು ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಲಾಗಿದೆ. ಈ ಪೈಕಿ ಲಷ್ಕರ್ ಸಂಘಟನೆಯ ಪ್ರಮುಖ ಕಮಾಂಡರ್ ಮುದಸಿರ್ ಪಂಡಿತ್ ಮತ್ತು ವಿದೇಶಿ ಉಗ್ರ ಪಾಕ್ ಮೂಲದ ಅಸ್ರಾರ್ ಅಲಿಯಾಸ್ ಅಬ್ದುಲ್ಲಾ ಕೂಡ ಸೇರಿದ್ದಾರೆ ಎಂದು ಹೇಳಿದರು. ಈ ಪೈಕಿ ವಿದೇಶಿ ಉಗ್ರ ಅಸ್ರಾರ್ ಅಲಿಯಾಸ್ ಅಬ್ದುಲ್ಲಾ 2018ರವರೆಗೂ ಉತ್ತರ ಕಾಶ್ಮೀರದಲ್ಲಿ ಸಕ್ರಿಯವಾಗಿ ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಎಂದು ತಿಳಿಸಿದರು. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: