ಮೈಸೂರು

ನರೇಗಾ ಕಾಮಗಾರಿ ಸ್ಥಳದಲ್ಲಿಯೇ ಕೂಲಿ ಕಾರ್ಮಿಕರಿಗೆ ಲಸಿಕೆ ವಿತರಣೆ 

ಮೈಸೂರು,ಜೂ.21-ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಸುಮಾರು 40 ಮಂದಿ ಕೂಲಿ ಕಾರ್ಮಿಕರಿಗೆ ಕೊರೊನಾ ಲಸಿಕೆ ನೀಡಲಾಯಿತು.

ಕೆ.ಆರ್.ನಗರ ತಾಲೂಕು ಪಂಚಾಯಿತಿ ವತಿಯಿಂದ ತಾಲೂಕಿನ ನರನಚನಹಳ್ಳಿ ಗ್ರಾಪಂ ವ್ಯಾಪ್ತಿಯ ಹನುಮನಹಳ್ಳಿ ಗ್ರಾಮದ ಕೆರೆ ಕಾಮಗಾರಿ ಸ್ಥಳದಲ್ಲೇ ಸುಮಾರು 40 ಮಂದಿ ಕೂಲಿ ಕಾರ್ಮಿಕರಿಗೆ ಕೊರೊನಾ ಪರೀಕ್ಷೆ ಮಾಡಿ ಲಸಿಕೆ ನೀಡಲಾಯಿತು.

ಈ ಸಂದರ್ಭ ತಹಸಿಲ್ದಾರ್‌ ಸಂತೋಷ್ ಮಾತನಾಡಿ, ಕೊರೊನಾ ಮಹಾಮಾರಿಯಿಂದ ಪಾರಾಗುವುದಕ್ಕೆ ಜಾಗೃತಿಯಷ್ಟೇ ವ್ಯಾಕ್ಸಿನ್‌ ಅಗತ್ಯವಾಗಿದೆ. ಹೀಗಾಗಿ, ಪ್ರತಿಯೊಬ್ಬರು ವ್ಯಾಕ್ಸಿನ್‌ ಹಾಕಿಸಿಕೊಳ್ಳಬೇಕು. ವ್ಯಾಕ್ಸಿನ್‌ ಹಾಕಿಸಿಕೊಳ್ಳುವುದಕ್ಕೆ ಯಾವುದೇ ರೀತಿಯ ಭಯ ಬೇಡ ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಮಹೇಂದ್ರಪ್ಪ ಮಾತನಾಡಿ, ಪ್ರತಿಯೊಬ್ಬರು ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ. 18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆಯನ್ನು ಪಡೆದುಕೊಳ್ಳಬೇಕು. ಕೆ.ಆರ್.ನಗರ ತಾಲ್ಲೂಕು ವ್ಯಾಕ್ಸಿನ್‌ ನೀಡುವಿಕೆಯಲ್ಲಿ ಮಾದರಿಯಾಗಿದೆ ಎಂದರು.

ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ರಘುನಾಥ್ ಮಾತನಾಡಿ, ಜನರ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಸರ್ಕಾರದ ಸೂಚನೆಯಂತೆ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್‌ ನೀಡಲಾಗುತ್ತಿದೆ. ವ್ಯಾಕ್ಸಿನ್‌ ಪಡೆಯುವುದರಿಂದ ಯಾರು ವಂಚಿತರಾಗಬಾರದು ಎಂಬ ಉದ್ದೇಶದಿಂದ ಇಂದು ಕಾಮಗಾರಿ ಸ್ಥಳದಲ್ಲಿಯೇ ವ್ಯಾಕ್ಸಿನ್‌ ನೀಡುವ ಕಾರ್ಯಕ್ರಮ ಆಯೋಜಿಸಿದ್ದೇವೆ ಎಂದು ಹೇಳಿದರು.

ಇದಕ್ಕೂ ಮುನ್ನಾ ನರೇಗಾ ಯೋಜನೆ ಕುರಿತಂತೆ ಕೂಲಿಕಾರ್ಮಿಕರಿಗೆ ಮಾಹಿತಿಯನ್ನು ಒದಗಿಸಿದರು. ಕೆರೆ ಕಾಮಗಾರಿಯನ್ನು ಪರಿಶೀಲಿಸಿ, ಮೆಚ್ಚುಗೆವ್ಯಕ್ತಪಡಿಸಿದರು.

ಈ ಸಂದರ್ಭ ತಾಲ್ಲೂಕು ಸಹಾಯಕ ನಿರ್ದೇಶಕ ಭಾಸ್ಕರ್‌, ಟಿಸಿ ಭರತ್‌, ಐಇಸಿ ಸಂಯೋಜಕ ರವಿಕುಮಾರ್‌, ಟಿಎಇ ಶಿವಕುಮಾರ್‌, ಪಿಡಿಒ ಗೋವಿಂದರಾಜು, ಗ್ರಾಪಂ ಅಧ್ಯಕ್ಷ ಮಂಜುನಾಥ್‌, ಉಪಾಧ್ಯಕ್ಷರಾದ ನಾಗಮಣಿ, ಬಿಎಫ್‌ ಟಿಗಳಾದ ಪವಿತ್ರ, ವಿ.ರಘು, ಎಂ.ಕೆ.ವೆಂಕಟರಾಜು ಇತರರು ಉಪಸ್ಥಿತರಿದ್ದರು. (ಎಂ.ಎನ್)

Leave a Reply

comments

Related Articles

error: