ಪ್ರಮುಖ ಸುದ್ದಿಮೈಸೂರು

ಕಾಂಗ್ರೆಸ್ ಪಕ್ಷ ವಿಶ್ವನಾಥ್ ಅವರಿಗೆ ತಾಯಿ ಇದ್ದಂತೆ : ಸಿದ್ದರಾಮಯ್ಯ ಟಾಂಗ್

ವಿಶ್ವನಾಥ್ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಅವರಿಗೆ ಕಾಂಗ್ರೆಸ್ ಪಕ್ಷ ತಾಯಿ ಇದ್ದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಮಾಜಿ ಸಂಸದ ಎಚ್.ವಿಶ್ವನಾಥ್  ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆಳಲ್ಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಮಾಜಿ ಸಂಸದ ವಿಶ್ವನಾಥ್ ಕಾಂಗ್ರೆಸ್ ನಾಯಕರ ಕುರಿತು ಅಸಮಾಧಾನ ಹೊಂದಿದ್ದಾರೆ. ಅವರು ಪಕ್ಷ ತೊರೆಯುತ್ತಾರೆ ಎಂಬ ವದಂತಿ ಕುರಿತಂತೆ ಪ್ರತಿಕ್ರಿಯಿಸಿದ ಅವರು ನಾನು ಇದುವರೆಗೂ ವಿಶ್ವನಾಥ್ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಾನು ಈ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ.ಈ ವಿಚಾರವನ್ನು ಅವರೇ ಸಾಕಷ್ಟು ಬಾರಿ ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡರು. ಅವಧಿಗೂ ಮುನ್ನ ಚುನಾವಣೆ ನಡೆಯಲಿದೆ ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಯಡಿಯೂರಪ್ಪ ಏನು ಎಲೆಕ್ಷನ್ ಕಮಿಷನರಾ ? ಅವರು ಐಟಿ ಆಯುಕ್ತರಾಗಿ ಕೆಲಸ ಮಾಡಿದ್ದಾಯ್ತು. ಇದೀಗ ಚುನಾವಣಾ ಅಧಿಕಾರಿ ಆಗುತ್ತಿದ್ದಾರೆ. ಈವರೆಗೆ ಅವರು ಹೇಳಿದ ಒಂದಾದರೂ ಭವಿಷ್ಯ ನಡೆದಿದೆಯಾ ಎಂದು ಅವರಿಗೇ ಕೇಳಿ ಎಂದು ವ್ಯಂಗ್ಯವಾಗಿ ಉತ್ತರಿಸಿದರು. ಅವಧಿಗೂ ಮುನ್ನ ಚುನಾವಣೆ ಬರುತ್ತೆ ಅಂತ ಅವರಿಗೆ ಹೇಗೆ ತಿಳಿಯುತ್ತೆ. ಯಡ್ಯೂರಪ್ಪ ಅಸಂಬದ್ದವಾಗಿ ಸುಳ್ಳು ಹೇಳುವ ವ್ಯಕ್ತಿ. ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಮುಂದಿನ ಏಪ್ರಿಲ್, ಮೇ ವೇಳೆಗೆ ಚುನಾವಣೆ. ಅಲ್ಲಿಯವರೆಗೆ ನಾವೇ ಅಧಿಕಾರದಲ್ಲಿ ಇರುತ್ತೇವೆ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭ ಗೃಹಸಚಿವ ಡಾ.ಜಿ.ಪರಮೇಶ್ವರ್, ಸಂಸದ ಧ್ರುವ ನಾರಾಯಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

comments

Related Articles

error: