ಕರ್ನಾಟಕಪ್ರಮುಖ ಸುದ್ದಿ

ದಕ್ಷಿಣ ಕನ್ನಡ: ನಾಳೆಯಿಂದ ಮಧ್ಯಾಹ್ನ 2 ರವರೆಗೆ ಎಲ್ಲ ಅಂಗಡಿಗಳು ಓಪನ್

ಮಂಗಳೂರು,ಜೂ.22-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಬೆಳಿಗ್ಗೆಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನ 2 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಲಾಕ್ ಡೌನ್ ನಿಂದ ಕೆಲವು ಸಮಸ್ಯೆಗಳಾಗಿದ್ದವು. ಜವಳಿ ವ್ಯಾಪರಸ್ಥರು ಸೇರಿದಂತೆ ಹಲವು ಅಂಗಡಿಗಳ ಮಾಲೀಕರು ಬದುಕಿ ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ ಎಂದು ದೂರು ನೀಡುತ್ತಿದ್ದರು. ಎಲ್ಲಾ ಶಾಸಕರು ಲಾಕ್ ಡೌನ್ ಸಡಿಲ ಮಾಡಬೇಕೆಂದು ಆಗ್ರಹ ಮಾಡುತ್ತಿದ್ದರು. ಇದಕ್ಕಾಗಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಚರ್ಚಿಸಿ ಜನಜೀವನಕ್ಕೆ ತೊಂದರಯಾಗದಂತೆ ನಾಳೆಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನ 2 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ಆದರೆ ಈ ಸಂದರ್ಭದಲ್ಲಿ ಸಾರ್ವಜನಿಕರು ಜಾಗರೂಕತೆಯಿಂದ ಇರಬೇಕು. ಎಲ್ಲೆಂದರಲ್ಲಿ ತಿರುಗಾಡಬಾರದು. ಲಸಿಕೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಕೋವಿಡ್ ನಿಯಮಗಳನ್ನು ಉಲ್ಲಂಘಿಸಬಾರದು. ಜನಜಂಗುಳಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: