ಮೈಸೂರು

ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ

ಮೈಸೂರು,ಜೂ.23:- ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ವತಿಯಿಂದ ಆಯೋಜಿಸಿದ್ದ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ಆನ್‍ಲೈನ್ ಯೋಗ ಅಧಿವೇಶನವನ್ನು ಸೋಮವಾರ ಬೆಳಿಗ್ಗೆ 7 ರಿಂದ 8 ಗಂಟೆ ವರೆಗೆ ಕಾಲೇಜಿನ ವಿದ್ಯಾರ್ಥಿಗಳಾದ ತನುಜ ಎಂ.ಕೆ. ಮತ್ತು ಹೇಮಂತ್ ಅಂತಿಮ ಬಿ.ಎ. ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಆರ್. ಜಯಕುಮಾರಿ, ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಡಾ. ಹೆಚ್.ಎನ್. ಭಾಸ್ಕರ್ ಹಾಗೂ ಮಧುಸೂಧನ್ ಹಾಜರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: