ಕರ್ನಾಟಕಪ್ರಮುಖ ಸುದ್ದಿ

ದೆಹಲಿಗೆ ತೆರಳಿದ ಬಿ.ವೈ.ವಿಜಯೇಂದ್ರ: ರಾಜಕೀಯ ವಲಯದಲ್ಲಿ ಸಂಚಲನ

ಬೆಂಗಳೂರು,ಜೂ.25-ನಾಯಕತ್ವ ಬದಲಾವಣೆ ವಿಚಾರ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಹೀಗಿರುವಾಗಲೇ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಸಿಎಂ ಬಿಎಸ್ವೈ ಪುತ್ರ ಬಿ.ವೈ.ವಿಜಯೇಂದ್ರ ನಿನ್ನೆ ದೆಹಲಿಗೆ ತೆರಳಿದ್ದಾರೆ.

ವಿಜಯೇಂದ್ರ ಅವರ ದಿಢೀರ್‌ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಆದರೆ, ವಿಜಯೇಂದ್ರ ಖಾಸಗಿ ವಿಷಯದ ಮೇಲೆ ದೆಹಲಿಗೆ ತೆರಳಿರುವುದಾಗಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ನಾಯಕತ್ವ ಬದಲಾವಣೆಯ ಕುರಿತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ರಾಜ್ಯಕ್ಕೆ ಆಗಮಿಸಿ ಶಾಸಕರ ಅಭಿಪ್ರಾಯ ಸಂಗ್ರಹಿಸಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ವರದಿ ನೀಡಿದ್ದಾರೆ ಎಂದು ಹೇಳಲಾಗಿತ್ತು. ಇದೇ ಬೆಳವಣಿಗೆಗಳ ಕುರಿತು ಸಿಎಂ ಯಡಿಯೂರಪ್ಪ ಅವರೇ ದೆಹಲಿಗೆ ತೆರಳಿ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಚರ್ಚಿಸಲು ಮುಂದಾಗಿದ್ದರು ಎಂದು ಹೇಳಲಾಗಿತ್ತು. ಇದರ ನಡುವೆಯೇ ವಿಜಯೇಂದ್ರ ದೆಹಲಿಗೆ ದಿಢೀರ್‌ ತೆರಳಿರುವುದು ಹಲವು ರೀತಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ. (ಎಂ.ಎನ್)

Leave a Reply

comments

Related Articles

error: