ಮೈಸೂರು

ಕಾಡುಹಂದಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಆ್ಯಂಬುಲೆನ್ಸ್ ಪಲ್ಟಿ

ಆ್ಯಂಬುಲೆನ್ಸ್ ಚಾಲಕನೋರ್ವ ಕಾಡು ಹಂದಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಆಂಬ್ಯುಲೆನ್ಸ್ ಉರುಳಿ ಬಿದ್ದು ಇಬ್ಬರು ಗಾಯಗೊಂಡಿರುವ ಘಟನೆ ಮಂಡ್ಯ ತಾಲೂಕಿನ ಬಸರಾಳು ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡವರನ್ನು ಆಂಬ್ಯುಲೆನ್ಸ್ ಚಾಲಕ ರವಿ ಮತ್ತು ಸಹಾಯಕ ಸುರೇಶ್  ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ನಾಗಮಂಗಲದಿಂದ ರೋಗಿಯೋರ್ವರನ್ನು  ಕರೆದುಕೊಂಡು ಬಂದು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ವಾಪಾಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮಂಗಳವಾರ ರಾತ್ರಿ 2.30 ಸುಮಾರಿಗೆ ಬಸರಾಳು ಬಳಿ ಹೋಗುತ್ತಿದ್ದ ವೇಳೆ ಆ್ಯಂಬುಲೆನ್ಸ್ ಗೆ  ಕಾಡುಹಂದಿ ಅಡ್ಡ ಬಂದಿದೆ.  ಈ ಕಾಡುಹಂದಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಆ್ಯಂಬುಲೆನ್ಸ್  ಚಾಲಕನ ನಿಯಂತ್ರಣ ತಪ್ಪಿದೆ. ಇದರ ಪರಿಣಾಮ ನಾಗಮಂಗಲ ಕಡೆಗೆ ಹೋಗುತ್ತಿದ್ದ ಆಂಬ್ಯುಲೆನ್ಸ್ ವಿಭಜಕವನ್ನು ದಾಟಿ ಪಕ್ಕದ ರಸ್ತೆಗೆ ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಅಪಾಯವಾಗಿಲ್ಲ. ವಾಹನದೊಳಗೆ ಸಿಲುಕಿ ಒದ್ದಾಡುತ್ತಿದ್ದ ಇಬ್ಬರನ್ನು ನೈಟ್ ಬೀಟ್ ಪೊಲೀಸರು ರಕ್ಷಣೆ ಮಾಡಿ ಬಸರಾಳು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: