ಕರ್ನಾಟಕಪ್ರಮುಖ ಸುದ್ದಿಮನರಂಜನೆ

ಕೋವಿಡ್ ಲಸಿಕೆ ಪಡೆದುಕೊಂಡ ನಟಿ ಮಾಲಾಶ್ರೀ

ಬೆಂಗಳೂರು,ಜೂ.25-ನಟಿ ಮಾಲಾಶ್ರೀ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಲಸಿಕೆ ಪಡೆದುಕೊಳ್ಳುತ್ತಿರುವ ಫೋಟೋವನ್ನು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ `ವ್ಯಾಕ್ಸಿನೇಟೆಡ್’ ಎಂದು ಬರೆದುಕೊಂಡಿದ್ದಾರೆ.

ಮಾಲಾಶ್ರೀ ಅವರ ಪತಿ ಇತ್ತೀಚೆಗೆ ಕೋಟಿ ರಾಮು ಕೊರೊನಾ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ. ಪತಿಯ ನೆನಪಿನಲ್ಲೇ ಬದುಕುತ್ತಿರುವ ಮಾಲಾಶ್ರೀ ಈಗ ಕೊರೊನಾ ಲಸಿಕೆ ಪಡೆದಿದ್ದಾರೆ.

ಈಗಾಗಲೇ ಚಿತ್ರರಂಗದ ಸಾಕಷ್ಟು ಕಲಾವಿದರು ಲಸಿಕೆ ಪಡೆದುಕೊಂಡಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಅನಂತ್ ನಾಗ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಅನೇಕರು ಕೊರೊನಾ ಲಸಿಕೆ ಪಡೆದಿದ್ದಾರೆ. ಅಭಿಮಾನಿಗಳಿಗೂ ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡುತ್ತಿದ್ದಾರೆ. (ಎಂ.ಎನ್)

Leave a Reply

comments

Related Articles

error: