ಮೈಸೂರು

ಜು.1ರಿಂದ ಜಿಎಸ್ ಟಿ ಜಾರಿ ಪೂರಕವೋ, ಮಾರಕವೋ ಕಾದು ನೋಡಬೇಕು : ಪ್ರೊ.ಬಿ.ಕೆ.ತುಳಸಿಮಾಲ

ಜುಲೈ 1ರಿಂದ ಏಕರೂಪದ ತೆರಿಗೆ ಜಿಎಸ್‍ಟಿ ಜಾರಿಯಾಗುತ್ತಿದ್ದು, ಯಾವ ರೀತಿ ಅನುಷ್ಠಾನಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಪ್ರೊ.ಬಿ.ಕೆ.ತುಳಸಿಮಾಲ ಅಭಿಪ್ರಾಯಪಟ್ಟರು.
ಬುಧವಾರ ಡಾ.ಬಿ.ಆರ್.ಅಂಬೇಡ್ಕರ್ 126ನೇ ಜನ್ಮದಿನಾಚರಣೆ ಅಂಗವಾಗಿ ಮೈಸೂರಿನ ಮಾನಸ ಗಂಗೋತ್ರಿಯ ಕಾನೂನು ಅಧ್ಯಯನ ಮತ್ತು ಸಂಶೋಧನ ವಿಭಾಗದ ಉಪನ್ಯಾಸ ಮಂದಿರದಲ್ಲಿ ಆಯೋಜಿಸಿದ್ದ ಭಾರತದಲ್ಲಿ ಸರಕು ಮತ್ತು ಸೇವಾ ತೆರಿಗೆ- ವಾಕ್ಚಾತುರ್ಯ ಮತ್ತು ವಾಸ್ತವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದೆಲ್ಲೆಡೆ ಏಕರೂಪದ ತೆರಿಗೆಗಾಗಿ ಇಡೀ ದೇಶವೇ ಎದುರು ನೋಡುತ್ತಿದ್ದು. ಇದೀಗ ಸಾಂವಿಧಾನಿಕ ಕಾಯ್ದೆಯನ್ನು ಒಳಗೊಂಡು ಜು.1ರಿಂದ ದೇಶಾದ್ಯಂತ ಜಾರಿಯಾಗುತ್ತಿದ್ದು, ಅಭಿವೃದ್ಧಿಗೆ ಪೂರಕವಾಗಲಿದೆಯೋ ಇಲ್ಲ ಮಾರಕವಾಗಲಿದೆಯೇ ಎಂಬುದನ್ನು ಕಾಲವೇ ನಿರ್ಧರಿಸಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾನೂನು ಅಧ್ಯಯನ ಮತ್ತು ಸಂಶೋಧನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಎಂ.ಸುರೇಶ್ ಬೆಂಜಾಮಿನ್, ಕಾನೂನು ಅಧ್ಯಯನ ಮತ್ತು ಸಂಶೋಧನ ವಿಭಾಗದ ಮುಖ್ಯಸ್ಥ ಡಾ.ಆರ್.ರಮೇಶ್, ಪ್ರಾಧ್ಯಾಪಕರಾದ ಜಿ.ಬಸವರಾಜು, ಜಿ.ಆರ್. ಮಾರುತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: