ಮೈಸೂರು

ರೈಲಿಗೆ ಸಿಲುಕಿ ವ್ಯಕ್ತಿ ಸಾವು

ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಮೈಸೂರಿನ ಅಶೋಕಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಮೃತನನ್ನು ಚಿಕ್ಕಹರದನಹಳ್ಳಿ ನಿವಾಸಿ ನಾಗರಾಜು (30) ಎಂದು ಗುರುತಿಸಲಾಗಿದೆ. ನಾಗರಾಜು ರೈಲ್ವೆ ನಿಲ್ದಾಣ ಸಮೀಪ ಟೀ ಅಂಗಡಿ ನಡೆಸುತ್ತಿದ್ದ.ರೈಲು ಡಿಕ್ಕಿಯಾದ  ರಭಸಕ್ಕೆ ತೀವ್ರ ಗಾಯಗೊಂಡಿದ್ದ ನಾಗರಾಜು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: