ಕರ್ನಾಟಕಪ್ರಮುಖ ಸುದ್ದಿ

ಜಿಲ್ಲಾ ಕ್ರೀಡಾಂಗಣದ ಉನ್ನತೀಕರಣಕ್ಕೆ ಕ್ರಮ : ಸಚಿವ ಡಾ.ಕೆ.ಸಿ ನಾರಾಯಣಗೌಡ

ರಾಜ್ಯ(ಮಂಡ್ಯ) ಜೂ 29:-  ಕ್ರೀಡಾಪಟುಗಳಿಗೆ ಉಪಯೋಗವಾಗುವಂತೆ ಜಿಲ್ಲೆಯ ಕ್ರೀಡಾಂಗಣವನ್ನು ಹಂತ ಹಂತವಾಗಿ ಉನ್ನತೀಕರಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ,ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ ನಾರಾಯಣಗೌಡರವರು ಹೇಳಿದರು.
ನಗರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಲ್ಲಿ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿ ಪಡಿಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಕ್ರೀಡಾಂಗಣದ ಉನ್ನತೀಕರಣಕ್ಕೆ 10 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದರು.
ಅದರಂತೆ ಹೆಣ್ಣು ಮಕ್ಕಳ ಹಾಸ್ಟೆಲ್ ಗೆ 2 ಕೋಟಿ ರೂ, ಗ್ರಾಮೀಣ ಭಾಗದ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದರು.
ಹೊರ ದೇಶಗಳಿಗೆ ಹೋಗುವ ಕ್ರೀಡಾ ಪಟುಗಳಿಗೆ 10 ಲಕ್ಷ ರೂ ಪ್ರೋತ್ಸಾಹ ಧನ ವನ್ನು ನೀಡಲಾಗುತ್ತಿದೆ ಎಂದರು. ಕ್ರೀಡಾಂಗಣವನ್ನು ಸಿಥೆಂಟಿಕ್ ಟ್ರಾಕ್ಸ್ ಮೂಲಕ, ಈ ಭಾಗಕ್ಕೆ ಯಾವ ಮಟ್ಟದಲ್ಲಿ ಉನ್ನತೀಕರಿಸಬೇಕು ಎಂಬುವುದನ್ನ ಗಮನಿಸಿ ಕ್ರಮವಹಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀನಿವಾಸ್,ವಿಧಾನಪರಿಷತ್ ಸದಸ್ಯರಾದ ಶ್ರೀಕಂಠೇಗೌಡ, ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ ಸಿಇಒ ದಿವ್ಯಪ್ರಭು, ನಗರಸಭಾ ಅಧ್ಯಕ್ಷ ಹೆಚ್ .ಎಸ್ ಮಂಜು, ಕ್ರೀಡಾಧಿಕಾರಿ ಅನಿತಾ ಮತ್ತಿತರರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: