ದೇಶಪ್ರಮುಖ ಸುದ್ದಿ

ಕೋವಿಡ್ ನಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ ನೀಡಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

ನವದೆಹಲಿ,ಜೂ.30- ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಪಾವತಿಸಲು ಆರು ವಾರಗಳಲ್ಲಿ ಮಾರ್ಗಸೂಚಿಗಳನ್ನು ರೂಪಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಿ, ಕೋವಿಡ್-19 ನಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ನೀಡಬಹುದಾದ ಪರಿಹಾರದ ಮೊತ್ತವನ್ನು ಅಂದಾಜು ಮಾಡಿ 6 ವಾರಗಳೊಳಗೆ ನೀಡುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಆದೇಶ ನೀಡಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್‌ಡಿಎಂಎ)ವು ಕೋವಿಡ್ ಸಂತ್ರಸ್ತರಿಗೆ ಪರಿಹಾರ ಸೇರಿದಂತೆ ಕನಿಷ್ಠ ಮಾನದಂಡಗಳ ಪರಿಹಾರವನ್ನು ಒದಗಿಸುವುದು ಶಾಸನಬದ್ಧವಾಗಿ ಕಡ್ಡಾಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ನೀಡದ ಮೂಲಕ, ಎನ್‌ಡಿಎಂಎ ತನ್ನ ಶಾಸನಬದ್ಧ ಕರ್ತವ್ಯವನ್ನು ನಿರ್ವಹಿಸುವಲ್ಲಿ ವಿಫಲವಾಗಿದೆ ಎಂದಿರುವ ನ್ಯಾಯಾಲಯ ಕೋವಿಡ್ ಸಂತ್ರಸ್ತರಿಗೆ ನಿರ್ದಿಷ್ಟ ಮೊತ್ತದ ಪರಿಹಾರ ನಿಗದಿಪಡಿಸಲು ನಿರಾಕರಿಸಿದೆ. ಇದು ಹಣಕಾಸಿನ ವಿಷಯವಾಗಿದೆ ಮತ್ತು ಅದನ್ನು ಕಾರ್ಯನಿರ್ವಾಹಕರಿಗೆ ಬಿಡಬೇಕು ಎಂದು ಹೇಳಿದೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: