
ಮೈಸೂರು
ರಾಷ್ಟ್ರೀಯ ವೈದ್ಯರ ದಿನಾಚರಣೆ: ರಕ್ತದಾನ ಮಾಡಿ ಸಸಿನೆಟ್ಟ ವೈದ್ಯರು
ಮೈಸೂರು,ಜು.1-ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ರಕ್ತದಾನ ಮಾಡಿ ಜೀವ ಉಳಿಸಿ, ವೈದ್ಯರ ಮೇಲಿನ ದೌರ್ಜನ್ಯವನ್ನು ನಿಲ್ಲಿಸಿ, ಸಂರಕ್ಷಕರನ್ನು ಉಳಿಸಿ ಎಂಬ ಘೋಷ ವಾಕ್ಯದೊಂದಿಗೆ ಇಂದು ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಸುಮಾರು 50 ಮಂದಿ ವೈದ್ಯರು ರಕ್ತದಾನ ಮಾಡಿದರು.
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಮತ್ತು ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ವತಿಯಿಂದ ಕೆ.ಆರ್.ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ವೈದ್ಯರು ರಕ್ತದಾನ ಮಾಡಿದರು.
ಬಳಿಕ ಹಸಿರುಕರಣಕ್ಕಾಗಿ ಮೈಸೂರು ವೈದ್ಯಕೀಯ ಕಾಲೇಜು, ಆರ್ ಡಿಎ, ಶಸ್ತ್ರಚಿಕಿತ್ಸಾ ವಿಭಾಗ ಹಾಗೂ ಲಯನ್ಸ್ ಕ್ಲಬ್ ಆಫ್ ವೈದ್ಯಸ್ ಸಂಯುಕ್ತಾಶ್ರಯದಲ್ಲಿ ಕೆ.ಆರ್.ಆಸ್ಪತ್ರೆಯ ಆವರಣದಲ್ಲೇ ಸುಮಾರು 50 ಸಸಿಗಳನ್ನು ನೆಡಲಾಯಿತು. ಅಲ್ಲದೆ, ಈ ವೇಳೆ ಲಯನ್ಸ್ ಕ್ಲಬ್ ಆಫ್ ವೈದ್ಯಸ್ ವತಿಯಿಂದ 20 ಮಂದಿ ವೈದ್ಯರು ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಡೀನ್ ಡಾ.ಸಿ.ಪಿ.ನಂಜರಾಜ್, ಪ್ರಾಂಶುಪಾಲರಾದ ಡಾ.ದ್ರಾಕ್ಷಾಯಿಣಿ, ಡಾ.ಎಚ್.ಎನ್.ದಿನೇಶ್, ಡಾ.ಮಂಜುನಾಥ್, ಡಾ.ಚಂದನ್, ಡಾ.ನಮ್ರತಾ, ರವೀಂದ್ರನಾಥ್ ಇತರರು ಉಪಸ್ಥಿತರಿದ್ದರು. (ಎಚ್.ಎನ್, ಎಂ.ಎನ್)