ಕರ್ನಾಟಕಪ್ರಮುಖ ಸುದ್ದಿ

ಕೆಆರ್ ಎಸ್ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಕ್ರಮಹಿಸುವಂತೆ ಅಧಿಕಾರಿಗಳಿಗೆ ಸಂಸದೆ ಸುಮಲತಾ ಅಂಬರೀಷ್ ಸೂಚನೆ

ರಾಜ್ಯ( ಮಂಡ್ಯ )ಜು.3 :- ಎಲ್ಲಾ ಇಲಾಖೆಗಳು ಕೇಂದ್ರವಲಯದ ಯೋಜನೆಗಳ ಅನುದಾನವನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಿ ಎಂದು ಅಧಿಕಾರಿಗಳಿಗೆ ಲೋಕಸಭಾ ಸಂಸದರು ಮತ್ತು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸುಮಲತಾ ಅಂಬರೀಷ್ ಸೂಚಿಸಿದರು.
ಇಂದು ಜಿಲ್ಲಾಪಂಚಾಯಿತಿ ಕಛೇರಿಯ ಕಾವೇರಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ಮತ್ತು ಕೇಂದ್ರ ವಲಯ ಅಥವಾ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಪಿಎಂ ಕಿಸಾನ್ ಯೋಜನೆ ಮೂಲಕ ರೈತರ ಸಂಕಷ್ಟಕ್ಕೆ ನೆರವಾಗಿ ಎಂದರು.

ಕೆ.ಆರ್ ಎಸ್ ,ಡ್ಯಾಂ ಅಸ್ತಿತ್ವಕ್ಕೆ ನೇರವಾಗಿ ಅಡ್ಡಿಯಾಗಿರೋದು ಅಕ್ರಮ ಗಣಿಗಾರಿಕೆ ಅದ್ದರಿಂದ ಕೆ.ಆರ್ ಎಸ್ ಡ್ಯಾಂ ಸುತ್ತಲಿನ ಶ್ರೀರಂಗಪಟ್ಟಣ-ಪಾಂಡವಪುರ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಲು ಕ್ರಮವಹಿಸಿ ಎಂದರು.

ಅಕ್ರಮ ಗಣಿಗಾರಿಕೆ ವಿಷಯವನ್ನ ಹಲವಾರು ಬಾರಿ ಸಂಸತ್ ಸಭೆಯಲ್ಲಿ ಚರ್ಚಿಸಿದ್ದೇನೆ, ಹಾಗೂ ಸಚಿವರ ಗಮನಕ್ಕೆ ತಂದಿದ್ದೇನೆ ಎಂದರು.

ಕೆ.ಆರ್ .ಎಸ್ ಡ್ಯಾಂ ರಕ್ಷಿಸಿ, ಅಕ್ರಮ ಚಟುವಟಿಕೆಗಳ ನಿಲ್ಲಿಸುವುದು ಜಿಲ್ಲಾಡಳಿತದ ಜವಾಬ್ದಾರಿ ಎಂದರು.
ಯಾವುದೇ ಕಾರಣಕ್ಕೂ ಕೆ.ಆರ್,ಎಸ್. ಜಲಾಶಯಕ್ಕೆ ತೊಂದರೆಯಾಗಬಾರದು ಎಂದರು.

ಜಿಲ್ಲೆಯಲ್ಲಿ ಗಣಿಗಾರಿಕೆ ನಡೆಸುವವರ ಬಳಿ ರಾಜಧನ ವಸೂಲಿ ಮಾಡಿ, ಹಾಗೂ ಅಕ್ರಮ ಗಣಿಗಾರಿಕೆ ನಡೆಸುವವರಿಗೆ ದಂಡ ವಿಧಿಸಿ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಪ್ಲಾಸ್ಟಿಕ್ ರಹಿತ ದಿನಾಚರಣೆ ಹಿನ್ನೆಲೆಯಲ್ಲಿ ಪ್ರತಿಜ್ಞಾವಿಧಿಯನ್ನು ಭೋದಿಸಲಾಯಿತು, ಹಾಗೂ ಗ್ರಾಮ ನೈರ್ಮಲ್ಯ ಸಂಬಂಧಿಸಿದ ಕೈಪಿಡಿ ಹಾಗೂ ಮಾಹಿತಿ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

2021-22ನೇ ಸಾಲಿನ ಸಂಸದರ ಆದರ್ಶ ಗ್ರಾಮಕ್ಕೆ ಮಂಡ್ಯ ತಾಲ್ಲೂಕಿನ ಬಸರಾಳು ಗ್ರಾಮವನ್ನು ಆಯ್ಕೆ ಮಾಡಿದ್ದು, ಈ ಗ್ರಾಮದ ಪ್ರಗತಿಗೆ ಸಹಕರಿಸಿ ಎಂದರು.

ನಿರುದ್ಯೋಗ ಸಮಸ್ಯೆ ನಿವಾರಿಸಲು ಜಾಬ್ ಕಾರ್ಡ್ ಮೇಳ ಆಯೋಜಿಸಿರುವುದು ಪ್ರಶಂಶನೀಯ ಎಂದರು.

ಮನಮುಲ್ ಹಗರಣದ ಬಗ್ಗೆ ಕ್ರಮವಹಿಸಿ ಈ ಸಮಸ್ಯೆ ಬಗೆಹರಿಸಿ ಎಂದರು.
ಸರ್ಕಾರಿ ಶಾಲೆಗಳ ದುಸ್ಥಿತಿಯನ್ನು ಸರಿಪಡಿಸಲು ಸಹಕರಿಸಿ‌‌ ಎಂದರು.

ಕರೋನಾ ಗೆಲ್ಲೋಣ ಜಾಗೃತಿ ಗೀತೆಯು ಬಹಳ ಚೆನ್ನಾಗಿ ಮೂಡಿಬಂದಿದ್ದು, ಈ ಮೂಲಕ ಕರೋನಾ ಬಗ್ಗೆ ಜಾಗೃತಿ ಮೂಡಿಸಿ, ಎಲ್ಲರ ಪ್ರಶಂಸೆಗೆ ಪಾತ್ರವಾದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗೆ ಅಭಿನಂದನೆ ತಿಳಿಸಿದರು.

ಜಿಲ್ಲೆಯಲ್ಲಿ ಲಸಿಕಾಕರಣ ಬಹಳ ಪರಿಣಾಮಕಾರಿಯಾಗಿ ಸಾಗಲು ಸಹಕರಿಸಿ ಎಂದರು.
ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಅಗತ್ಯ ಸೌಲಭ್ಯಗಳು, ಆಕ್ಸಿಜನ್ ಬೆಡ್, ಎಲ್ಲಾ ಪ್ರಾಥಮಿಕ‌ ಆರೋಗ್ಯ ಕೇಂದ್ರಗಳಿಗೆ ವೈದ್ಯರ ನಿಯೋಜನೆಯನ್ನು ಮಾಡಿಸಿ ಮೂರನೇ ಅಲೆ ಎದುರಿಸಲು ಸಜ್ಜಾಗಿ ಎಂದರು.

ಸಂಸದರ ಆದರ್ಶಗ್ರಾಮಯೋಜನೆಯಡಿ ಬೆಸಗರಹಳ್ಳಿ ಗ್ರಾಮದಲ್ಲಿ ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಸಾಗಲು ಸೂಕ್ತ ಕ್ರಮವಹಿಸಿ ಹಾಗೂ ತ್ಯಾಜ್ಯ ನಿರ್ವಹಣೆ ಬಗ್ಗೆ ಸೂಕ್ತ ಕ್ರಮವಹಿಸಿ ಪರಿಹರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ ಸಿ ಇ ಒ ದಿವ್ಯಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ , ಉಪವಿಭಾಗಾಧಿಕಾರಿ ಐಶ್ವರ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಧನಂಜಯ ಮತ್ತು ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: