ಮೈಸೂರು

ವೃದ್ಧೆ ಹತ್ಯೆಗೈದು ಚಿನ್ನಾಭರಣ ಲೂಟಿ

ಮನೆಯಲ್ಲಿ ಯಾರೂ ಇಲ್ಲದ ವೇಳೆ  ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧೆಯನ್ನು ಕೊಂದು ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗಿರುವ ಘಟನೆ ಹುಣಸೂರಿನ ಹೊರಭಾಗದಲ್ಲಿ ಬುಧವಾರ ಹಾಡಹಗಲೇ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಜೋಸೆಫ್ ರ ಪತ್ನಿ ಫಿಲೋಮಿನಾ ಎಂದು ಗುರುತಿಸಲಾಗಿದೆ. ಮೃತರಿಗೆ ಇಬ್ಬರು ಮಕ್ಕಳಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಫಿಲೋಮಿನಾರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾರೆ. ತಲೆಯ ಹಿಂಬದಿಗೆ ಬರ್ಬರವಾಗಿ ಹೊಡೆದು ಅವರ ಕತ್ತಿನಲ್ಲಿದ್ದ 30 ಗ್ರಾಂ ಚಿನ್ನದ ಸರ ಮತ್ತು ಕೈಯಲ್ಲಿದ್ದ ಒಂದು ಚಿನ್ನದ ಬಳೆಯನ್ನು ಕದ್ದೊಯ್ದಿದ್ದಾರೆ.

ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ‍್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಬಿಳಿಕೆರೆ ಠಾಣಾಧಿಕಾರಿ ನವೀನ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.(ಕೆ.ಎಸ್.ಎಲ್.ಜಿ)

Leave a Reply

comments

Related Articles

error: