
ಮೈಸೂರು
ಕೆ.ಆರ್.ಕ್ಷೇತ್ರದ ನಾಗರೀಕರಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ
ಮೈಸೂರು,ಜು.5:- ಮೈಸೂರು ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೋಲ್ಡ್ಸ್ ವರ್ಥ್ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್, ಕಾವೇರಿ ಆಸ್ಪತ್ರೆ, ಕಾಮಾಕ್ಷಿ ಆಸ್ಪತ್ರೆ ಮೈಸೂರು ವತಿಯಿಂದ ಕೆ.ಆರ್.ಕ್ಷೇತ್ರದ ನಾಗರೀಕರಿಗೆ ಲಸಿಕೆ ನೀಡುವ ಅಭಿಯಾನವನ್ನು ಕುವೆಂಪುನಗರದಲ್ಲಿರುವ ಪ್ರಮತಿ ಹಿಲ್ ವ್ಯೂ ಅಕಾಡೆಮಿಯಲ್ಲಿಂದು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಶಾಸಕ ಎಸ್.ಎ.ರಾಮದಾಸ್ , ಪಾಲಿಕೆ ಸದಸ್ಯ ಎಂ.ಸಿ.ರಮೇಶ್, ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)