ಕರ್ನಾಟಕಪ್ರಮುಖ ಸುದ್ದಿಮೈಸೂರು

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಭೇಟಿ ಮಾಡಿದ ವಿವಿ ಸಿಂಡಿಕೇಟ್ ಸದಸ್ಯರು

ಮೈಸೂರು/ಬೆಂಗಳೂರು,ಜು.6:- ಉಪ ಮುಖ್ಯ ಮಂತ್ರಿಗಳು ಹಾಗೂ ಉನ್ನತ ಶಿಕ್ಷಣ,ಐ ಟಿ ಬಿ ಟಿ ಸಚಿವರಾದ  ಡಾ.ಸಿ ಎನ್ ಅಶ್ವಥ್ ನಾರಾಯಣ ಅವರನ್ನು ಇಂದು ಮೈಸೂರು ವಿವಿ ಸಿಂಡಿಕೇಟ್ ಸದಸ್ಯರು ವಿಕಾಸ ಸೌಧದಲ್ಲಿ  ಭೇಟಿ ಮಾಡಿ ವಿಶ್ವವಿದ್ಯಾಲಯಗಳ ಹಲವು ಸಮಸ್ಯೆಗಳನ್ನು ಚರ್ಚಿಸಿದರು.

ಈ ಸಂದರ್ಭದಲ್ಲಿ ಕೋವಿಡ್ ನಿಂದ ಆಗಿರುವಂತಹ ತೊಂದರೆಗಳು ,ಹಲವು ವಿಶ್ವವಿದ್ಯಾಲಯಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಹಾಗೂ ಪ್ರಸ್ತುತ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಸ್ತುತತೆ ಹಾಗೂ ಜಾರಿಯ ಕುರಿತು   ಉಪ ಮುಖ್ಯ ಮಂತ್ರಿಗಳು ಒಳ್ಳೆಯ ವಿಚಾರಗಳನ್ನು ತಿಳಿಸಿದರು .ಇದರ ಜೊತೆಗೆ ವಿಶ್ವವಿದ್ಯಾಲಯಗಳಲ್ಲಿ ಖಾಲಿ‌ ಇರುವ ಬೋಧಕ ಬೋಧಕೇತರ ಹುದ್ದೆಗಳ ಭರ್ತಿಗೆ ಮುಂದಿನ ದಿನಗಳಲ್ಲಿ ಕ್ರಮ ವಹಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ.ಕೆ ವಸಂತ ಕುಮಾರ್ ,ಸದಸ್ಯರಾದ ಕೆ ಎನ್ ಪಾಟಿಲ್ ,ಡಾ.ಸುನಂದ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: