ಕರ್ನಾಟಕಪ್ರಮುಖ ಸುದ್ದಿ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕ: 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ

ಬೆಂಗಳೂರು,ಜು.6-ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಸಿಂಗ್ ಗೆಹ್ಲೋಟ್ ಅವರು ನೇಮಕಗೊಂಡಿದ್ದಾರೆ. ವಜುಭಾಯಿ ವಾಲಾ ಬಳಿಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್ ಸಿಂಗ್ ಗೆಹ್ಲೋಟ್ ಅವರು ನೇಮಕಗೊಂಡಿದ್ದಾರೆ.

2014ರಿಂದ ರಾಜ್ಯಪಾಲರಾಗಿದ್ದ ವಜುಭಾಯ್ ವಾಲಾ ಅವರ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಥಾವರ್‌ಚಂದ್‌ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಇಂದು ನೇಮಕಾತಿ ಆದೇಶ ಮಾಡಿದ್ದಾರೆ.

ಪ್ರಸ್ತುತ ಕೇಂದ್ರ ಸರಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿರುವ ಗೆಹ್ಲೋಟ್ ಅವರು ರಾಜ್ಯಸಭೆಯಲ್ಲಿನ ಬಿಜೆಪಿ ನಾಯಕರಾಗಿದ್ದಾರೆ. ಜತೆಗೆ ಸಂಸದೀಯ ಸಮಿತಿ ಹಾಗೂ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಗಳಲ್ಲಿ ಸದಸ್ಯರಾಗಿದ್ದಾರೆ.

ಕರ್ನಾಟಕ ಸೇರಿದಂತೆ ಒಟ್ಟು 8 ರಾಜ್ಯಗಳ ರಾಜ್ಯಪಾಲರನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಹರಿಯಾಣದ ರಾಜ್ಯಪಾಲರಾಗಿ ಬಂದಾರು ದತ್ತಾತ್ರೇಯ ಅವರನ್ನು ನೇಮಿಸಲಾಗಿದೆ. ಹಿಮಾಚಲ ಪ್ರದೇಶದ ಉಸ್ತುವಾರಿ ವಹಿಸಿದ್ದ ದತ್ತಾತ್ರೇಯ ಈಗ ಹರಿಯಾಣದಲ್ಲಿ ಸ್ಥಾನ ವಹಿಸಿಕೊಳ್ಳಲಿದ್ದಾರೆ. ಮಿಜೋರಾಂಗೆ ಹರಿ ಬಾಬು ಕಂಬಂಪತಿ, ಮಧ್ಯಪ್ರದೇಶಕ್ಕೆ ಮಂಗುಭಾಯಿ ಚಗನ್ ಭಾಯ್ ಪಟೇಲ್, ಹಿಮಾಚಲ ಪ್ರದೇಶಕ್ಕೆ ರಾಜೇಂದ್ರನ್ ವಿಶ್ವನಾಥ ಅರ್ಲೇಕರ್, ಗೋವಾಗೆ ಪಿಎಸ್ ಶ್ರೀಧರನ್ ಪಿಳ್ಳೈ, ತ್ರಿಪುರಾಗೆ ಸತ್ಯದೇವ್ ನಾರಾಯಣ ಆರ್ಯ, ಜಾರ್ಖಂಡ್ ಗೆ ರಮೇಶ್ ಬೈಸ್ ಅವರನ್ನು ನೇಮಿಸಲಾಗಿದೆ. (ಎಂ.ಎನ್)

Leave a Reply

comments

Related Articles

error: