ಮೈಸೂರು

ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಸ್ಮರಣಾರ್ಥ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು,ಜು.6:- ಮೈಸೂರು ನಗರದ ವಿವಿಧೆಡೆ ಇಂದು ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಸ್ಮರಣಾರ್ಥ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ದಟ್ಟಗಳ್ಳಿಯ ಮಹಾಮನೆ ವೃತ್ತದ ಉದ್ಯಾನವನದಲ್ಲಿ, ಹಾಗೂ ಕುವೆಂಪು ನಗರದ ಬಿ.ಸಿ.ಎಂ ಇಲಾಖೆಯ ಮಹಿಳಾ ಹಾಸ್ಟೆಲ್ನಲ್ಲಿ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು  ಸಸಿಗಳನ್ನು  ನೆಟ್ಟು ನೀರು ಹಾಕಿದರು. ವಿಜಯನಗರದ 4ನೇ ಹಂತದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 15 ಸಾವಿರ ಗಿಡ ನೆಡುವ ಕಾರ್ಯಕ್ರಮಗಳಿಗೆ ಉಸ್ತುವಾರಿ ಸಚಿವರು ಚಾಲನೆ ನೀಡಿದರು. ನಂತರ  ಹೆಬ್ಬಾಳುನಲ್ಲಿ ನೂತವಾಗಿ ನಿರ್ಮಾಣವಾದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅನ್ನು ಉದ್ಘಾಟಿಸಿದರು.

ಕಾರ್ಯಕ್ರಮಗಳಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಡಿ.ಬಿ.ನಟೇಶ್, ಅರಗು ಮತ್ತು ಬಣ್ಣದ ಕಾರ್ಖಾನೆಯ ಅಧ್ಯಕ್ಷ ಫಣೀಶ್,  ಮುಖಂಡ ಶ್ರೀವತ್ಸ, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ಇತರರು ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: