ಕರ್ನಾಟಕಪ್ರಮುಖ ಸುದ್ದಿ

ಪ್ರಕೃತಿ ವಿಕೋಪ ಎದುರಿಸಲು ಸನ್ನದ್ಧರಾಗಿ ; ಕಂದಾಯ ಸಚಿವ ಆರ್.ಅಶೋಕ್

ರಾಜ್ಯ(ಮಡಿಕೇರಿ) ಜು.7:- ಕೊಡಗು ಜಿಲ್ಲೆಯಲ್ಲಿ ಮುಂಗಾರು ಸಂದರ್ಭದಲ್ಲಿ ಸಾಕಷ್ಟು ಅನಾಹುತ ಉಂಟಾಗುತ್ತದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕಿದೆ. ಆ ದಿಸೆಯಲ್ಲಿ ಭೂಕುಸಿತ ಸಂಭವಿಸಬಹುದಾದ ಪ್ರದೇಶಗಳಿಗೆ ಎನ್‍ಡಿಆರ್‍ಎಫ್ ತಂಡ ಭೇಟಿ ನೀಡಿ ವೀಕ್ಷಣೆ ಮಾಡಬೇಕು. ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಕಂದಾಯ ಸಚಿವರಾದ ಆರ್.ಅಶೋಕ ಅವರು ನುಡಿದರು.

ನಗರದ ಜಿ.ಪಂ. ಸಭಾಂಗಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಪ್ರಾಕೃತಿಕ ವಿಕೋಪ ಎದುರಿಸಲು ಸರ್ಕಾರ ಇನ್ನಷ್ಟು ಹೆಚ್ಚಿನ ಹಣ ಬಿಡುಗಡೆ ಮಾಡಲಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಮುಂಗಾರು ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಆ ದಿಸೆಯಲ್ಲಿ ಜಿಲ್ಲಾಧಿಕಾರಿ ಅವರ ಖಾತೆಯಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವ ದಿಸೆಯಲ್ಲಿ 50 ಕೋಟಿ ರೂ. ಗೂ ಹೆಚ್ಚು ಹಣ ಇದೆ ಎಂದು ಕಂದಾಯ ಸಚಿವರಾದ ಆರ್.ಅಶೋಕ ಅವರು ತಿಳಿಸಿದ್ದಾರೆ.

ಕಂದಾಯ ಇಲಾಖೆ ಜೊತೆ ಪೊಲೀಸ್, ಜಿ.ಪಂ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹೀಗೆ ಹಲವು ಇಲಾಖೆಗಳು ಕೈಜೋಡಿಸಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಪ್ರಾಕೃತಿಕ ವಿಕೋಪ ಎದುರಿಸಲು ಸರ್ಕಾರದಿಂದ ಎಲ್ಲಾ ರೀತಿಯ ಅಗತ್ಯ ನೆರವು ನೀಡಲಾಗುವುದು ಎಂದು ಕಂದಾಯ ಸಚಿವರು ಹೇಳಿದರು.

ಮುಂಗಾರು ಸಂದರ್ಭದಲ್ಲಿ ಭೂ ಕುಸಿತ ಹಾಗೂ ಪ್ರವಾಹ ಸಂಭವಿಸಬಹುದಾದ ಪ್ರದೇಶದ ಜನರನ್ನು ಸ್ಥಳಾಂತರಿಸಬೇಕು. ಶಾಲೆ, ಅಂಗನವಾಡಿ, ಕಲ್ಯಾಣ ಮಂಟಪ ಮತ್ತಿತರ ಕಡೆಗಳಲ್ಲಿ ಸ್ಥಳಾಂತರಿಸಬೇಕು. ಕಾಳಜಿ ಕೇಂದ್ರದಲ್ಲಿ ಶೌಚಾಲಯ, ಕುಡಿಯುವ ನೀರು, ಇತರ ಅಗತ್ಯ ಸೌಲಭ್ಯಗಳು ಇರಬೇಕು ಎಂದು ಸಚಿವರು ಸೂಚಿಸಿದರು.

ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್ ಅವರು ಹಲವು ವಿಚಾರಗಳ ಕುರಿತು ಗಮನಸೆಳೆದರು. ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಇತರರು ಇದ್ದರು. ನಗರದ ಚಾಮುಂಡೇಶ್ವರಿ ನಗರ ಮತ್ತಿತರ ಕಡೆಗಳಿಗೆ ಭೇಟಿ ನೀಡಿ ಸಚಿವರು ವೀಕ್ಷಿಸಿದರು. (ಜಿ.ಕೆ,ಎಸ್.ಎಚ್)

 

Leave a Reply

comments

Related Articles

error: