ಮೈಸೂರು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ರಕ್ತದಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದ ಚೇತನ್  

ಮೈಸೂರು,ಜು.8:- ಜಾಗೋ ಮೈಸೂರು ಅಧ್ಯಕ್ಷರಾದ   ಚೇತನ್ ಮಂಜುನಾಥ್ ಅವರು ತಮ್ಮ ಮೂವತ್ತಾರನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ದೇಶದ ಪ್ರಧಾನಿ   ನರೇಂದ್ರ ಮೋದಿ ಜಿ ಅವರಿಗೆ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು   ರಕ್ತದಲ್ಲಿ  ಪತ್ರ ಬರೆದು ಪೋಸ್ಟ್ ಮಾಡಿದ್ದಾರೆ.

ಮೇ 2 ರಂದು ಅಲ್ಲಿಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬಂದ ದಿನದಿಂದ ಇಲ್ಲಿಯವರೆಗೂ ತೃಣಮೂಲ ಕಾಂಗ್ರೆಸ್ಸಿನ ಕಾರ್ಯಕರ್ತರು ಮತ್ತು  ಅಲ್ಲಿಯ ಮೂಲಭೂತ ವಾದಿಗಳು 30 ಬಿಜೆಪಿ ಕಾರ್ಯಕರ್ತರು ಮತ್ತು ಅಮಾಯಕ ಹಿಂದೂಗಳ  ಭೀಕರ ಕೊಲೆಗಳನ್ನು ಮಾಡಿದ್ದಾರೆ, ಸುಮಾರು 7 ಸಾವಿರ ಹಿಂದೂ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ,ಸುಮಾರು 15000 ಪ್ರಕರಣಗಳು ದಾಖಲಾಗಿವೆ, 1ಲಕ್ಷಕ್ಕೂ ಹೆಚ್ಚು ಮಂದಿ ಪ್ರಾಣ ಭಯದಿಂದ ಪಕ್ಕದ ರಾಜ್ಯಗಳಿಗೆ ವಲಸೆ ಹೋಗಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ಸಿನ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಲ್ಲದೆ ಈ ಎಲ್ಲಾ ಹಿಂಸೆಗಳಿಗೆ ಪರೋಕ್ಷ ಬೆಂಬಲವನ್ನು ನೀಡಿ ಕಣ್ಣುಮುಚ್ಚಿ ಕುಳಿತಿದೆ.

ಈ ಹಿನ್ನೆಲೆಯಲ್ಲಿ ಅಲ್ಲಿಯ ಅಮಾಯಕ ಹಿಂದೂಗಳು ಮತ್ತು ಬಿಜೆಪಿ ಕಾರ್ಯಕರ್ತರ ರಕ್ಷಣೆ ಮಾಡಲು ರಾಷ್ಟ್ರಪತಿ ಆಳ್ವಿಕೆ ಒಂದೇ ಮಾರ್ಗವಾಗಿದೆ.  ಆದ್ದರಿಂದ ತಕ್ಷಣ ಪ್ರಧಾನಿ   ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು   ಚೇತನ್ ಮಂಜುನಾಥ್ ತಮ್ಮ ರಕ್ತದಲ್ಲಿ ಮನವಿ ಪತ್ರವನ್ನು ಬರೆದಿದ್ದಾರೆ.

ಮತ್ತು ಈಗಾಗಲೇ ನಡೆಯುತ್ತಿರುವ ತನಿಖೆಯನ್ನು ಚುರುಕುಗೊಳಿಸಿ ಎಲ್ಲಾ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದ್ದಾರೆ.

ನೊಂದ ಎಲ್ಲ ಸಂತ್ರಸ್ತರಿಗೆ ವಿಶೇಷ ಹಣಕಾಸು ಪ್ಯಾಕೇಜ್ ಘೋಷಿಸಬೇಕು ಮತ್ತು ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: