ಮೈಸೂರು

ಅಮೃತದಲ್ಲಿ ಉಚಿತ ಕೋವಿಡ್-19 ಲಸಿಕಾ ಶಿಬಿರ

ಮೈಸೂರು,ಜು.8:- ಬೋಗಾದಿಯ ಅಮೃತ ವಿಶ್ವವಿದ್ಯಾಪೀಠಂ ನಲ್ಲಿ ಇಂದು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಉಚಿತ ಲಸಿಕಾ ಶಿಬಿರವು ಯಶಸ್ವಿಯಾಗಿ ಜರುಗಿತು. ಟಿ.ಕೆ ಲೇಔಟ್ ನ ಪ್ರಾಥಮಿಕ ಆರೋಗ್ಯ ಕೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೈಸೂರು ಜಿಲ್ಲೆ ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಈ ಶಿಬಿರದಲ್ಲಿ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಲಸಿಕೆ ಪಡೆದರು.
ಈ ಶಿಬಿರದ ಶುಭಾರಂಭವನ್ನು ಅಮೃತ ವಿಶ್ವವಿದ್ಯಾಪೀಠಂ ಮೈಸೂರು ಕ್ಯಾಂಪಸ್ ನ ನಿರ್ದೇಶಕರಾದ ಬ್ರಹ್ಮಚಾರಿ ಅನಂತಾನಂದ ಚೈತನ್ಯ, ಸಂಚಾಲಕರಾದ ಬ್ರಹ್ಮಚಾರಿ ಮುಕ್ತಿಧಾಮೃತ ಚೈತನ್ಯ, ಪ್ರಾಂಶುಪಾಲರಾದ ಡಾ. ಜಿ ರವೀಂದ್ರನಾಥ್ ಹಾಗೂ ಶೈಕ್ಷಣಿಕ ಸಂಯೋಜಕರಾದ ಡಾ. ರೇಖಾಭಟ್ ಅವರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: