ಮೈಸೂರು

ಕರಾಮುವಿಯಲ್ಲಿ ಕೆ-ಸಿಇಟಿ 30ದಿನಗಳ ಆನ್ ಲೈನ್ ತರಬೇತಿ

ಮೈಸೂರು,ಜು.10:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ) 30 ದಿನಗಳ ಆನ್‍ಲೈನ್ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದೆ.

ಆಸಕ್ತರು ಜುಲೈ 17 ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಛೇರಿಯಲ್ಲಿ ಬೆಳಿಗ್ಗೆ 10  ಗಂಟೆಯಿಂದ ಸಂಜೆ 4  ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0821-2515944 ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ   ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: