ಮೈಸೂರು

ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ನೂತನ ಜಿಲ್ಲಾಧ್ಯಕ್ಷರು

ಮೈಸೂರು,ಜು.12:-  ಮೈಸೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಡಾ.ಹೆಳವರಹುಂಡಿ ಸಿದ್ದಪ್ಪನವರನ್ನು ಹಾಗೂ ನಿಗ೯ಮಿತ ಅಧ್ಯಕ್ಷರಾದ ಎಂ.ಚಂದ್ರಶೇಖರ್ ಅವರನ್ನು ಅಖಿಲ ಭಾರತ ಶರಣಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರು ಸುತ್ತೂರು ಶ್ರೀ ವೀರ ಸಿಂಹಾಸನ  ಮಠಾಧೀಶರಾದ   ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರು ಆಶೀವ೯ದಿಸಿದರು.

ಹಿಂದಿನ ಅಧ್ಯಕ್ಷರ ಅವಧಿಯಲ್ಲಿ ಶರಣ ಸಾಹಿತ್ಯಕ್ಕೆ ಸಂಬಂಧಿಸಿದ ಅನೇಕ ರಚನಾತ್ಮಕ ಹಾಗೂ ಸೃಜನಶೀಲ ಕಾರ್ಯಕ್ರಮಗಳು ಗ್ರಾಮಾಂತರ ಪ್ರದೇಶಗಳಲ್ಲಿ ನಡೆದಿರುವುದನ್ನು ಪ್ರಶಂಸಿಸಿ ನೂತನ ಅಧ್ಯಕ್ಷರು ಹೆಚ್ಚಿನ ರೀತಿಯಲ್ಲಿ ಜಿಲ್ಲೆಯಾದ್ಯಂತ ಶರಣ ಸಾಹಿತ್ಯ ಪರಿಷತ್ತಿನ ಆಶಯಗಳಿಗೆ ಅನುಗುಣವಾಗಿ ಎಲ್ಲರನ್ನೂ ಸಂಘಟಿಸಿ ಸಮಾರಂಭವನ್ನು ಅಯೋಜಿಸುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಹಿರಿಯ ಕನ್ನಡ ಹೋರಾಟಗಾರರಾದ ಮೂಗೂರು ನಂಜುಂಡಸ್ವಾಮಿಯವರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: