ಕರ್ನಾಟಕಪ್ರಮುಖ ಸುದ್ದಿ

ವಿಷಯುಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರ ಸಾವು : ಚಿತ್ರದುರ್ಗದಲ್ಲಿ ಘಟನೆ

ರಾಜ್ಯ(ಚಿತ್ರದುರ್ಗ)ಜು.13:-   ವಿಷಯುಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಇಸಾಮುದ್ರದಲ್ಲಿ ಈ ಘಟನೆ ನಡೆದಿದ್ದು, ತಿಪ್ಪಾನಾಯ್ಕ್ (46), ಪತ್ನಿ ಸುಧಾಬಾಯಿ (43) ಹಾಗೂ ವೃದ್ಧೆ ಗುಂಡಿ ಬಾಯಿ (75) ಮೃತಪಟ್ಟವರಾಗಿದ್ದಾರೆ.   ರಾಹುಲ್ (18) ಹಾಗೂ ರಮ್ಯಾ (16) ಅಸ್ವಸ್ಥರಾಗಿದ್ದು, ದಾವಣಗೆರೆ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.

ಒಂದೇ ಕುಟುಂಬದ 5 ಮಂದಿ ವಿಷಾಹಾರ ಸೇವಿಸಿದ್ದಾರೆ. ಈ ವೇಳೆ ವಿಷಾಹಾರ ಸೇವಿಸಿದ ಮೂವರು ಸಾವನ್ನಪ್ಪಿದ್ದಾರೆ, ಮತ್ತಿಬ್ಬರು ಅಸ್ವಸ್ಥರಾಗಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: