ದೇಶಪ್ರಮುಖ ಸುದ್ದಿ

ವರದಕ್ಷಿಣೆ ಪದ್ಧತಿ ವಿರುದ್ಧ ಕೇರಳ ರಾಜ್ಯಪಾಲರಿಂದ ಉಪವಾಸ ಸತ್ಯಾಗ್ರಹ

ತಿರುವನಂತಪುರಂ,ಜು.14- ವರದಕ್ಷಿಣೆ ಪದ್ಧತಿಯ ವಿರುದ್ಧ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಇಂದು ಬೆಳಿಗ್ಗೆಯಿಂದ ಒಂದು ದಿನದ ಉಪವಾಸ ಆರಂಭಿಸಿದ್ದಾರೆ.

ವರದಕ್ಷಿಣೆ ಪದ್ಧತಿಯ ವಿರುದ್ಧ ಸಾಮಾಜಿಕ ಜಾಗೃತಿ ಮೂಡಿಸಲು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಕೊನೆಗಾಣಿಸುವ ಉದ್ದೇಶದೊಂದಿಗೆ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಇಲ್ಲಿನ ರಾಜಭವನದ ತಮ್ಮ ಅಧಿಕೃತ ನಿವಾಸದಲ್ಲಿ ಉಪವಾಸ ಆರಂಭಿಸಿದ್ದಾರೆ.

ಬೆಳಿಗ್ಗೆ 8 ಗಂಟೆಯಿಂದ ರಾಜ್ಯಪಾಲರು ಉಪವಾಸ ಆರಂಭಿಸಿದ್ದು, ಸಂಜೆ 6ರವರೆಗೆ ಮುಂದುವರಿಸುತ್ತಾರೆ. ಈ ಉಪವಾಸ ದಿನದ ಭಾಗವಾಗಿ ಗಾಂಧಿ ಸ್ಮಾರಕ ನಿಧಿ ಮತ್ತಿತರರ ಸಂಘಟನೆಗಳು ಸಂಜೆ ಗಾಂಧಿಭವನದಲ್ಲಿ ಆಯೋಜಿಸಿರುವ ಪ್ರಾರ್ಥನಾ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.

‌‌ಗಾಂಧಿ ಸ್ಮಾರಕ ನಿಧಿ ಮತ್ತಿತರ ಸಂಘಟನೆಗಳ ಸಹಯೋಗದವರು ಕರೆ ನೀಡಿದ್ದ ವರದಕ್ಷಿಣೆ ಪದ್ಧತಿ ವಿರುದ್ಧದ ಸಾಮಾಜಿಕ ಜಾಗೃತಿ ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸಿ ಅವರು ಈ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ.‌  ಗಾಂಧಿ ಭವನದಲ್ಲೂ ಕೆಲವೊಂದು ಗಾಂಧಿ ಅನುಯಾಯಿ ಸಂಘಟನೆಗಳ ಕಾರ್ಯಕರ್ತರು ಬೆಳಿಗ್ಗೆಯಿಂದ ಉಪವಾಸ ಆರಂಭಿಸಿದ್ದಾರೆ.

ಮಂಗಳವಾರ ಸಂಜೆ ಬಿಡುಗಡೆ ಮಾಡಿದ ವಿಡಿಯೊ ಸಂದೇಶದಲ್ಲಿ ರಾಜ್ಯಪಾಲ ಖಾನ್ ಅವರು, ‘ವರದಕ್ಷಿಣೆ ‌ಎಂಬುದು ಕೇರಳ ರಾಜ್ಯದ ಪ್ರಗತಿಗೆ ಕೊಡುಗೆ ನೀಡುತ್ತಿರುವ ಮಹಿಳೆಯರ ಘನತೆಗೆ ಮಾಡುತ್ತಿರುವ ಗಂಭೀರ ಅನ್ಯಾಯ ಮತ್ತು ಅವಮಾನ’ ಎಂದು ಹೇಳಿದ್ದರು. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: